The New Indian Express
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ರಜೆಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬುಧವಾರ ಹೇಳಿದ್ದಾರೆ.
1 ರಿಂದ 9ನೇ ತರಗತಿಗಳು ಆನ್‌ಲೈನ್‌ನಲ್ಲಿ ನಡೆಯುತ್ತವೆ. ಆದಾಗ್ಯೂ, ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದಾಗಿ ಇದು ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತದೆ. ಸೋಂಕುಗಳು ಹೆಚ್ಚಾಗಿದ್ದರೂ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ ಮತ್ತು ಮಕ್ಕಳ ಮೇಲೆ ಕಡಿಮೆ ಪರಿಣಾಮ ಬೀರುವುದರಿಂದ ಇತರ ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚದಂತೆ ಸಚಿವರು ಸಲಹೆ ನೀಡಿದರು.
ಇದನ್ನು ಓದಿ: ರಾಜ್ಯದಲ್ಲಿ 3ನೇ ಅಲೆ ಆರ್ಭಟ: ಬೆಂಗಳೂರಿನಲ್ಲಿ 15,617 ಸೇರಿ ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆ, 10 ಸಾವು!
ಪ್ರಸ್ತುತ ಬೆಂಗಳೂರಿನಲ್ಲಿ 10, 11, 12ನೇ ತರಗತಿ ನಡೆಸುತ್ತಿದ್ದೇವೆ. ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಿದೆ. ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಈ ಮೊದಲು ಜನವರಿ 19ರವರೆಗೆ ಮಾತ್ರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ದಿನದಿಂದ ದಿನಕ್ಕೆ ಕೊರೋನಾ ಸೋಂಕಿನ ಪ್ರಮಾಣ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಸೋಂಕು ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳ ರಜೆ ವಿಸ್ತರಣೆ ಮಾಡಲಾಗಿದೆ.
ಈ ಮಧ್ಯೆ, ಧಾರವಾಡ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಬೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶ ಹೊರಡಿಸಿದ್ದಾರೆ.
Read more
[wpas_products keywords=”deal of the day”]