The New Indian Express
ವಿಜಯಪುರ: ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವಿನ ಮಾತಿನ ಸಮರ ಬುಧವಾರವೂ ಮುಂದುವರಿದಿದ್ದು, ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ನಡುವಲ್ಲೇ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ನಾಯಕರು ಕ್ಷಮೆಯಾಚಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಾಜಕೀಯ ನಾಟಕವನ್ನು ಕಾಂಗ್ರೆಸ್ ನಿಲ್ಲಿಸಬೇಕು. ಅದರ ಪಾದಯಾತ್ರೆಯಿಂದಾಗಿ, ಶಾಸಕರು ಮತ್ತು ಮಾಜಿ ಶಾಸಕರು ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ಸೋಂಕಿಗೊಳಗಾಗಿದ್ದಾರೆ. ಕಾಂಗ್ರೆಸ್‌ನ ರಾಜಕೀಯ ಗಿಮಿಕ್‌ನಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನನಗೆ ಯಾವುದೇ ನೊಟೀಸ್ ಬಂದಿಲ್ಲ, ನೋಡೋಣ ಪಾದಯಾತ್ರೆ ತಡೆಯಲಿ: ಸಿದ್ದರಾಮಯ್ಯ
ಪಾದಯಾತ್ರೆ ಕೈಬಿಡುವಂತೆ ನಾವು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೇವೆ. ರ್ಯಾಲಿ ನಿಲ್ಲಿಸುವಂತೆ ಕೇಳುವುದರ ಹಿಂದೆ ನಮ್ಮ ಯಾವುದೇ ತಂತ್ರವೂ ಇಲ್ಲ. ಸಾಂಕ್ರಾಮಿಕ ಸಮಯದಲ್ಲಿ ಪಾದಯಾತ್ರೆ ನಡೆಸಿದ್ದಕ್ಕಾಗಿ ಅವರು ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ 2013 ರ ಕೃಷ್ಣಾ ಜಲಾನಯನ ಪಾದಯಾತ್ರೆಯ ಬಗ್ಗೆ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ ಕಾರಜೋಳ ಅವರು, “ಕಾಂಗ್ರೆಸ್ ಇಂತಹ ಪಾದಯಾತ್ರೆಯನ್ನು ನಡೆಸುತ್ತಿರುವುದು ಇದೇ ಮೊದಲಲ್ಲ. 2013ರಲ್ಲಿ ಕೃಷ್ಣಾ ಜಲಾನಯನ ಪ್ರದೇಶದಲ್ಲಿ 15 ಲಕ್ಷ ಹೆಕ್ಟೇರ್ ಒಣ ಭೂಮಿಗೆ ನೀರುಣಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ 2013ರಲ್ಲಿ ಕೃಷ್ಣಾ ಜಲಾನಯನ ಪ್ರದೇಶದ ಜನತೆಗೆ ನೀಡಿದ್ದ ಭರವಸೆಗಳಲ್ಲಿ ಅರ್ಧದಷ್ಟು ಈಡೇರಿಸಲಿಲ್ಲ. ಕೃಷ್ಣಾ ಜಲಾನಯನ ಪ್ರದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಇದಕ್ಕೂ ಅವರು ಕ್ಷಮೆಯಾಚಿಸಬೇಕು. ಸುಳ್ಳು ಭರವಸೆಗಳನ್ನು ನೀಡಿ ಐದು ದಶಕಗಳಿಂದ ದೇಶವನ್ನು ಆಳಿದ್ದಾರೆ. ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಅದೇ ರೀತಿ ಕುಸಿಯುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ: ‘ಕೈ’ನಾಯಕರ ವಿರುದ್ಧ ಮತ್ತೊಂದು ಎಫ್ ಐಆರ್, ಇಂದು ಪಾದಯಾತ್ರೆಗೆ ಬ್ರೇಕ್?
ಕಾಂಗ್ರೆಸ್ ಶಾಸಕ ಎಂ ಬಿ ಪಾಟೀಲ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತಿರುವ ವಿವಿಧ ಸಂಘಟನೆಗಳ ಸದಸ್ಯರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಈ ರೀತಿ ಕೀಳು ಮಟ್ಟಕ್ಕೆ ಇಳಿಯುವುದಿಲ್ಲ. ಪಾಟೀಲ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ ಎಂದಿದ್ದಾರೆ.
Read more
[wpas_products keywords=”deal of the day”]