Karnataka news paper

ಹರಿದ್ವಾರ ದ್ವೇಷಪೂರಿತ ಭಾಷಣ: ಧರ್ಮ ಸಂಸದ್ ಪ್ರಕರಣದಲ್ಲಿ ಮೊದಲ ಬಂಧನ


PTI

ಡೆಹ್ರಾಡೂನ್: ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ನಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನವಾಗಿದ್ದು, ವಸೀಂ ರಿಜ್ವಿ ಅಲಿಯಾಸ್ ಜಿತೇಂದ್ರ ನಾರಾಯಣ ತ್ಯಾಗಿ ಅವರನ್ನು ಗುರುವಾರ ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ಬಂಧಿಸಲಾಗಿದೆ.

ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ತನ್ನ ಹೆಸರನ್ನು ಜಿತೇಂದ್ರ ನಾರಾಯಣ ತ್ಯಾಗಿ ಎಂದು ಬದಲಾಯಿಸಿಕೊಂಡ ರಿಜ್ವಿ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ 10 ಕ್ಕೂ ಹೆಚ್ಚು ಜನರ ಹೆಸರಿದೆ.

ಇದನ್ನು ಓದಿ: ಹರಿದ್ವಾರ ಧರ್ಮ ಸಂಸದ್ ನಲ್ಲಿ ದ್ವೇಷಪೂರಿತ ಭಾಷಣ ಪ್ರಕರಣ: 5 ಮಂದಿ ಸದಸ್ಯರ ವಿಶೇಷ ತನಿಖಾ ತಂಡದಿಂದ ವಿಚಾರಣೆ

ಹಿಂದೆ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥರಾಗಿದ್ದ ರಿಜ್ಲಿಯನ್ನು ಇಂದು ರೂರ್ಕಿಯ ನರ್ಸನ್ ಗಡಿಯಲ್ಲಿ ಬಂಧಿಸಲಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ಯೋಗೇಂದ್ರ ರಾವತ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಹರಿದ್ವಾರದಲ್ಲಿ ಡಿಸೆಂಬರ್ 17 ರಿಂದ 19 ರವರೆಗೆ ನಡೆದ ಧರ್ಮ ಸಂಸದ್‌ನಲ್ಲಿ ಭಾಗವಹಿಸಿದ ಕೆಲವರು ಮುಸ್ಲಿಮರ ವಿರುದ್ಧ ಹೆಚ್ಚು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.



Read more

[wpas_products keywords=”deal of the day”]