Karnataka news paper

‘ದೇವರು ಇದ್ದಾನೋ ಇಲ್ಲವೋ’: ಸಮನ್ವಿ ಸಾವಿನ ಕುರಿತು ಸೃಜನ್ ಲೋಕೇಶ್ ನುಡಿ ನಮನ


ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್‌ ಸ್ಟಾರ್’ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ನಿಧನದಿಂದ ಕನ್ನಡ ಕಿರುತೆರೆ ಲೋಕದಲ್ಲಿ ಸೂತಕದ ಛಾಯೆ ಆವರಿಸಿದೆ.

ನಟ ಸೃಜನ್ ಲೋಕೇಶ್ ಮತ್ತು ಸಮನ್ವಿ ಅವರ ನಡುವೆ ಒಳ್ಳೆಯ ಬಾಂಧವ್ಯವಿತ್ತು. ಈ ಬಗ್ಗೆ ಸೃಜನ್ ತಮ್ಮ ಬರಹದ ಮೂಲಕ ವಿವರಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ದೇವರು ನಿಜವಾಗಿಯೂ ದೇವರಾ? ಅಥವಾ ದೇವರು ಇದ್ದಾನಾ? ಇಲ್ಲ, ದೇವರನ್ನ ನಂಬಲೇಬೇಕಾ? ಈ ಪ್ರಶ್ನೆಗಳು ಆಗಾಗ ಮೂಡಿ ಬರುತ್ತಿವೆ. ಈ ಘಟನೆಯ ನಂತರ ನಿಜವಾಗಲೂ ದೇವರು ಇದ್ದಾನೋ ಇಲ್ಲವೋ ಅನ್ನೋ ಪ್ರಶ್ನೆ ಮನಸ್ಸಿಗೆ ತುಂಬಾ ಗಾಢವಾಗಿ ಕಾಡುತ್ತಿದೆ. ಪುಟ್ಟ ಕಂದ ಸಮನ್ವಿ ಮಿಸ್ ಯೂ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.

ಪಟಪಟನೆ ಮಾತನಾಡುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಪುಟಾಣಿ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಗುರುವಾರ ಬೆಂಗಳೂರಿನ ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಮನ್ವಿ ನಿಧನರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯ ತಾಯಿ ಅಮೃತಾ ನಾಯ್ಡು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ… ಪಂತ್ ಸೆಂಚುರಿ ಪಂಚ್; ಆಕಾಶಕ್ಕೆ ಚಿಮ್ಮಿದ ಬ್ಯಾಟ್, ಬೌಂಡರಿ ಗೆರೆ ದಾಟಿದ ಚೆಂಡು!



Read More…Source link

[wpas_products keywords=”deal of the day party wear for men wedding shirt”]