Karnataka news paper

ಮೀಟೂ ಪ್ರಕರಣ: ಅರ್ಜುನ್ ಸರ್ಜಾಗೆ ರಿಲೀಫ್, ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್!


The New Indian Express

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ನ್ಯಾಯಾಲಯ ಅಂಗೀಕರಿಸಿದೆ.

ಕನ್ನಡ ಸಿನಿರಂಗದಲ್ಲಿ ಸಾಕಷ್ಟು ಬಿರುಗಾಳಿ ಎಬ್ಬಿಸಿದ್ದ ಮೀಟೂ ಪ್ರಕರಣದಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಅಂಗೀಕರಿಸಿದೆ. 

ಅರ್ಜುನ್ ಸರ್ಜಾ ವಿರುದ್ಧ ಅಷ್ಟೆಲ್ಲಾ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಕೂಡ ಪೊಲೀಸರ ಬಿ ರಿಪೋರ್ಟ್‍ಗೆ ಆಕ್ಷೇಪಣೆ ಸಲ್ಲಿಸಿಲ್ಲ. ಹೀಗಾಗಿ ಕೋರ್ಟ್ ಬಿ-ರಿಪೋರ್ಟ್ ಅಂಗೀಕರಿಸಿದೆ ಎಂದು ತಿಳಿದುಬಂದಿದೆ. 

2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮೀಟೂ ಕೇಸ್ ದಾಖಲಿಸಿದ್ದರು. ಆದರೆ ನಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಸೂಕ್ತ ಸಾಕ್ಷಾಧಾರಗಳು ಸಿಗದ ಹಿನ್ನೆಲೆ, ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್‍ಗೆ ಬಿ-ರಿಪೋರ್ಟ್ ಸಲ್ಲಿಸಿದ್ದರು. 

ನಟಿ ಶೃತಿ ಹರಿಹರನ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ತನಿಖೆ ನಡೆಸಿದ್ದ ಕಬ್ಬನ್ ಪಾರ್ಕ್ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಿದ್ದರು. ನಟಿ ಶೃತಿ ಹರಿಹರನ್ ಮಾಡಿದ್ದ ಅರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷಾಧಾರಗಳು ಲಭ್ಯವಾಗಿಲ್ಲ. ನಟಿ ಶೃತಿ ಹರಿಹರನ್ ಆರೋಪ ಸಮರ್ಥಿಸುವ ಸಿಸಿಟಿವಿ ಫೂಟೇಜ್ ಸಿಕ್ಕಿಲ್ಲ, ಸಾಕ್ಷಿದಾರರು ಹೇಳಿಕೆಯಲ್ಲಿ ದಾಖಲಿಸಿಲ್ಲ. ಹೀಗಾಗಿ ದೊಡ್ಡ ವಿವಾದ ಹುಟ್ಟು ಹಾಕಿದ್ದ ಮೀಟೂ ಪ್ರಕರಣ ತನಿಖೆ ನಡೆಸಿದ್ದ ಕಬ್ಬನ್ ಪಾರ್ಕ್ ಪೊಲೀಸರು ಬಿ ವರದಿ ಸಲ್ಲಿಸಿದ್ದರು.
 



Read more…

[wpas_products keywords=”party wear dress for women stylish indian”]