
ಹೌದು, ಖಾಸಗಿ ಟೆಲಿಕಾಂಗಳಾದ ಜಿಯೋ, ಏರ್‌ಟೆಲ್, ವಿ ಟೆಲಿಕಾಂ ಕಂಪೆನಿಗಳು ದೈನಂದಿನ 3GB ಡೇಟಾ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿವೆ.ಇತ್ತೀಚಿನ ದಿನಗಳಲ್ಲಿ ದೈನಂದಿನ 3GB ಡೇಟಾ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳು ಹೆಚ್ಚಿನ ಬೇಡಿಕೆಯನ್ನು ಪಡೆದುಕೊಂಡಿವೆ. ಮನೆಯಿಂದಲೇ ಕಾರ್ಯನಿರ್ವಹಿಸುವವರಿಗೆ, ಆನ್‌ಲೈನ್ ಕ್ಲಾಸ್‌ನಲ್ಲಿ ಭಾಗವಹಿಸವುವವರಿಗೆ ಈ ಪ್ಲಾನ್‌ಗಳು ಸೂಕ್ತವಾಗಿವೆ. ಹಾಗಾದ್ರೆ ದೈನಂದಿನ 3GB ಡೇಟಾ ಪ್ರಯೋಜನ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 419ರೂ ಪ್ರೀಪೇಯ್ಡ್ ಪ್ಲಾನ್
ಜಿಯೋ 419ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಯನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ನೀಡಲಿದೆ. ಇನ್ನು ಈ ಪ್ಲಾನಿನಲ್ಲಿ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 601ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ನಿಮಗೆ 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ನೀಡಲಿದೆ. ಈ ಅವಧಿಯಲ್ಲಿ ನಿಮಗೆ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ನೀಡಲಿದೆ. ಜೊತೆಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆ ಪ್ರಯೋಜನ ನೀಡಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ.

ಏರ್‌ಟೆಲ್ 699ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂ 699ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂ 901ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ 901ರೂ. ಪ್ರಿಪೇಯ್ಡ್ ಪ್ಲಾನ್ 70 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿನಿತ್ಯ 3GB ಡೇಟಾ, 100 SMS ಹಾಗೂ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಹಾಗೆಯೇ Vi ಚಲನಚಿತ್ರಗಳು ಮತ್ತು ಲೈವ್ ಟಿವಿಯಂತಹ ಪ್ರಯೋಜನಗಳನ್ನು ಹೊಂದಿದೆ.
Read more…
[wpas_products keywords=”smartphones under 15000 6gb ram”]