Source : Online Desk
ಮುಂಬೈ: ಟೀಂ ಇಂಡಿಯಾ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ನೇಮಕವಾದ ನಂತರ ಅವರು 10 ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಟ್ವೀಟರ್ ನಲ್ಲಿ ವೈರಲ್ ಆಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಪ್ರವಾಸಕ್ಕೆ ಬಿಸಿಸಿಐ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಆದರೆ, ರೋಹಿತ್ ಶರ್ಮಾ ಅವರನ್ನು ನೂತನ ವೈಟ್ ಬಾಲ್ ಕ್ಯಾಪ್ಟನ್ ಆಗಿ ನೇಮಕ ಮಾಡಲಾಗಿದೆ. ಇದೇ ವೇಳೆ ರೋಹಿತ್ ಶರ್ಮಾ 10 ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಇದೀಗ ವೈರಲ್ ಆಗಿದೆ.
2011 ರ ಐಸಿಸಿ ವಿಶ್ವಕಪ್ ತಂಡದಿಂದ ಹೊರಗುಳಿದ ನಂತರ ತಮ್ಮ ನಿರಾಶೆಯನ್ನು ರೋಹಿತ್ ಶರ್ಮಾ ಟ್ವೀಟ್ ನಲ್ಲಿ ವ್ಯಕ್ತಪಡಿಸಿದ್ದರು. ವಿಶ್ವ ಕಪ್ ತಂಡದ ಭಾಗವಾಗಿರುದಕ್ಕೆ ನಿಜಕ್ಕೂ ನಿರಾಶೆಯಾಗಿದೆ. ನಾನು ಇಲ್ಲಿಂದ ಮುಂದುವರಿಯಬೇಕಾಗಿದೆ. ಆದರೆ ಪ್ರಾಮಾಣಿಕವಾಗಿ ಇದು ದೊಡ್ಡ ಹಿನ್ನಡೆಯಾಗಿದೆ ಎಂದು ರೋಹಿತ್ ಶರ್ಮಾ 2011ರಲ್ಲಿ ಟ್ವೀಟ್ ಮಾಡಿದ್ದರು.
Really really disappointed of not being the part of the WC squad..I need to move on frm here..but honestly it was a big setback..any views!
— Rohit Sharma (@ImRo45) January 31, 2011
2011ರಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿದ್ದಾಗ ರೋಹಿತ್‌ಗೆ ಏಕದಿನ ವಿಶ್ವಕಪ್‌ನಲ್ಲಿ ಪ್ರಶಸ್ತಿ ಎತ್ತಿ ಹಿಡಿಯುವ ಅವಕಾಶ ಕೈತಪ್ಪಿತ್ತು. ಅಂದಿನಿಂದ, ಭಾರತ 2015 ಮತ್ತು 2019 ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲ್ಲಲು ವಿಫಲವಾಗಿದೆ. ಎರಡೂ ಸಂದರ್ಭಗಳಲ್ಲಿ ಸೆಮಿಸ್‌ನಿಂದ ಹೊರಗುಳಿಯಿತು.
2023 ರ ವಿಶ್ವಕಪ್ ಭಾರತದಲ್ಲಿ ನಡೆಯಲಿದ್ದು, ಟ್ರೋಫಿ ಎತ್ತಿ ಹಿಡಿಯುವ ನಿಟ್ಟಿನಲ್ಲಿ ರೋಹಿತ್ ತಂಡಕ್ಕೆ ಮಾರ್ಗದರ್ಶನ ನೀಡುವ ಭರವಸೆಯಲ್ಲಿದ್ದಾರೆ.