Karnataka news paper

Union Budget session 2022: ಸಂಸತ್ತಿನ ಬಜೆಟ್ ಅಧಿವೇಶನ ಜ.31ರಿಂದ; ಫೆ.1ರಂದು ಕೇಂದ್ರ ಬಜೆಟ್ ಮಂಡನೆ


PTI

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ(Union Budget session 2022) ಜನವರಿ 31ರಂದು ರಾಷ್ಟ್ರಪತಿಗಳು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದೆ. 

ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ನೀಡಿರುವ ಶಿಫಾರಸುಗಳ ಮೇರೆಗೆ ಬಜೆಟ್ ಅಧಿವೇಶನ ನಡೆಸುವ ನಿರ್ಧಾರ ಕೈಗೊಳ್ಳಲಾಗಿದ್ದು ಕೇಂದ್ರ ಸಾಮಾನ್ಯ ಬಜೆಟ್(Union Budget) ಫೆಬ್ರವರಿ 1ರಂದು ಮಂಡನೆಯಾಗಲಿದೆ. ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 11ರಂದು ಮುಕ್ತಾಯವಾಗಿ ಒಂದು ತಿಂಗಳ ನಂತರ ಅಂದರೆ ಮಾರ್ಚ್ 14ರಿಂದ ಏಪ್ರಿಲ್ 8ರವರೆಗೆ ಎರಡನೇ ಭಾಗದ ಅಧಿವೇಶನ ನಡೆಯಲಿದೆ. 

ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಮೂರನೇ ಅಲೆ, ಓಮಿಕ್ರಾನ್ ರೂಪಾಂತರಿ ಹೆಚ್ಚಳ ಸಮಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿರುವುದು ಸಂಸತ್ ಸದಸ್ಯರಿಗೆ, ಸಿಬ್ಬಂದಿಗೆ, ಅಧಿಕಾರಿಗಳಿಗೆ ಕಠಿಣವಾಗಿದೆ. ಸೂಕ್ತ ಆರೋಗ್ಯ ಮುನ್ನೆಚ್ಚರಿಕೆ ಕ್ರಮಗಳ ಮಧ್ಯೆ ಬಜೆಟ್ ಅಧಿವೇಶನ ನಡೆಸಬೇಕಿದೆ. 

ದೆಹಲಿಯಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳ ಮತ್ತು 400ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕಾಗಿ ಉಭಯ ಸದನಗಳ(ರಾಜ್ಯಸಭೆ ಮತ್ತು ಲೋಕಸಭೆ) ಪಾಳಿಯಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಈಗಾಗಲೇ 400ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. 



Read more

[wpas_products keywords=”deal of the day”]