ಬೆಂಗಳೂರು: ‘ಮೇಕೆದಾಟು ಯೋಜನೆ ಬಗ್ಗೆ ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರಿಗೆ ಉತ್ತರ ಕೊಡಲು ಸರ್ಕಾರ ಇದೆ, ನಾವ್ಯಾಕೆ ಉತ್ತರಿಸೋಣ? ನಾನು ಸರ್ಕಾರವಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಮೇಕೆದಾಟು ಯೋಜನೆಗೆ ಮೇಧಾ ಪಾಟ್ಕರ್ ಹಾಗೂ ಇತರರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಯೋಜನೆಗೆ ನನ್ನದೂ ಸೇರಿದಂತೆ ನಮ್ಮ ಕ್ಷೇತ್ರದ ಜನರ ಆಸ್ತಿಗಳು ಹೋಗುತ್ತಿದ್ದು, ವಿರೋಧ ಮಾಡುವುದಾದರೆ ನಾವು ಮಾಡಬೇಕು. ಈ ಯೋಜನೆಯಿಂದ ನಮ್ಮ ತಾಲ್ಲೂಕಿಗೆ ಬಹಳ ನಷ್ಟ ಉಂಟಾಗಲಿದೆ. ಅವರು ಹಿರಿಯ ಮಹಿಳೆ, ಅವರಿಗೆ ಉತ್ತರ ನೀಡಲು ಬೊಮ್ಮಾಯಿ ಸೂಕ್ತ ವ್ಯಕ್ತಿ’ ಎಂದರು.
‘ಮೇಧಾ ಪಾಟ್ಕರ್ ಅವರ ಭಾವನೆ ಗೌರವಿಸುತ್ತೇವೆ. ಅವರು ತಮ್ಮದೇ ಆದ ಚಿಂತನೆಗಳ ಮೇಲೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. ನಮ್ಮ ಹೋರಾಟ ವ್ಯಕ್ತಿಗತ ಚಿಂತನೆಯಲ್ಲ, ಜನರ ಚಿಂತನೆ. ನಮ್ಮದು ಜನರ ಬಯಕೆ, ಬದುಕಿನ ಹೋರಾಟ. ನೀರು ನಮಗೆ ಜೀವ, ಜೀವ ಇದ್ದರಷ್ಟೇ ಜೀವನ. ಅವರ ಅಭಿಪ್ರಾಯ ಅವರದ್ದು. ಸರ್ಕಾರ ಇಂಥ ಯೋಜನೆಗೆ ಪರಿಸರ ಇಲಾಖೆ ಅನುಮತಿಯಂಥ ಕಾನೂನು ಮಾಡಿರುವುದು ಇವರಿಗಾಗಿಯೇ’ ಎಂದರು.
ಬೆಂಗಳೂರಿನ ಕೆರೆ ಕಟ್ಟೆಗಳನ್ನು ಜೀರ್ಣೋದ್ಧಾರ ಮಾಡಿದರೆ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಬಹುದು ಎಂಬ ಹೇಳಿಕೆಗೆ, ‘ಸರ್ಕಾರ ಈ ವಿಚಾರವಾಗಿ ಸಮಿತಿ ಮಾಡಲಿ. ಎಲ್ಲಿ ಕಟ್ಟುನಿಟ್ಟಿನ ಪಾಲನೆ ಆಗುತ್ತಿದೆ. ಎಲ್ಲರೂ ಮಳೆ ನೀರಿನ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕು ಎಂಬ ನಿಯಮವಿದೆ. ಎಲ್ಲರೂ ಅದನ್ನು ಎಲ್ಲಿ ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.
‘ಕೆಲವರು ಒಂದು ಎಕರೆ ಮುಳುಗಡೆಯಾದರೆ ಎರಡು ಎಕರೆ ನೀಡಬೇಕು ಎಂದು ಹೇಳುತ್ತಾರೆ. ರಸ್ತೆ ಅಗಲ ಮಾಡಿದರೆ ಆಸ್ತಿ ಹೋಗುತ್ತದೆ ಎಂದು ಸುಮ್ಮನಿದ್ದರೆ ರಸ್ತೆ ಆಗುವುದಿಲ್ಲ. ರಾಜೀವ್ ಗಾಂಧಿ ಅವರು ಯೋಜನೆಗಳಿಗೆ ಆಸ್ತಿ ಸ್ವಾಧೀನ ಕಾನೂನು ತಂದು ಜನರಿಗೆ ಉತ್ತಮ ಪರಿಹಾರ ಸಿಗುವಂತೆ ಮಾಡಿದರು. ಕೆಲವರು ಸರ್ಕಾರಿ ಅಧಿಕಾರಿಗಳನ್ನು ಜೊತೆ ಮಾಡಿಕೊಂಡು ಸುಳ್ಳು ದಾಖಲೆ ಸೃಷ್ಟಿಸಿ ನೂರಾರು ಕೋಟಿ ಹಣ ಪರಿಹಾರಕ್ಕೆ ಆಗ್ರಹಿಸುತ್ತಾರೆ.
ಕನ್ನಡ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು: ಆಟೊ ಹಿಂದಿಕ್ಕಲು ಹೋಗಿ ಅಪಘಾತ
‘ಮೇಕೆದಾಟು ಯೋಜನೆ ಎಲ್ಲರಿಗೂ ಅನುಕೂಲವಾಗಲಿದ್ದು, ನಮ್ಮ ಸರ್ಕಾರ ಇದ್ದಾಗ ಕಾವೇರಿ ನ್ಯಾಯಮಂಡಳಿಯ ತೀರ್ಪು ಹೊರಬಂದಿತ್ತು. ಹೀಗಾಗಿ ಈ ಯೋಜನೆಗೆ ಜೀವ ಬಂದಿತ್ತು. ತೀರ್ಪು ಬಂದ ನಂತರ ಡಿಪಿಆರ್ ಮಾಡಿದ್ದೆವು. ನಮ್ಮ ಸರ್ಕಾರ ಇನ್ನೂ ಕೆಲವು ತಿಂಗಳು ಇರುತ್ತಿದ್ದರೆ ಈ ಯೋಜನೆ ಒಂದು ಹಂತಕ್ಕೆ ಬರುತ್ತಿತ್ತು. ಬಿಜೆಪಿ ಸರ್ಕಾರ ಈ ಯೋಜನೆ ಮುಂದಕ್ಕೆ ತೆಗೆದುಕೊಂಡು ಹೋಗಲಿದೆ ಎಂದು ಭಾವಿಸಿದ್ದೆ. ಅಲ್ಲಿದ್ದ ಮಂತ್ರಿಗಳು, ಇಲ್ಲಿದ್ದ ಮುಖ್ಯಮಂತ್ರಿಗಳು ಅವರವರ ಕೆಲಸದಲ್ಲೇ ಮುಳುಗಿದ್ದರು. ಹೊಸ ಮುಖ್ಯಮಂತ್ರಿ ಬಂದಿದ್ದಾರೆ, ಅವರಿಗೆ ನೀರಾವರಿ ಇಲಾಖೆ ನಿರ್ವಹಿಸಿ, ಅದರ ವ್ಯವಸ್ಥೆ ಗೊತ್ತಿದೆ. ನಾವು ಸ್ವಲ್ಪ ದಿನ ಕಾದು ನಂತರ ಹೋರಾಟ ಆರಂಭಿಸಿದ್ದೇವೆ’ ಎಂದರು.
‘ಬೆಂಗಳೂರಿಗೆ ನೀರು ತರಬೇಕಾದರೆ ನಮ್ಮ ಜಮೀನು ಹೋಗುತ್ತವೆ. ರೈತರ ಜಮೀನಿಗೆ ಉತ್ತಮ ಬೆಲೆ ನೀಡುವಂತೆ ಹೋರಾಟ ಮಾಡುತ್ತೇವೆ. ಮಳವಳ್ಳಿ ಮೂಲಕವಾಗಿ ಬೆಂಗಳೂರಿಗೆ ನೀರು ತಂದಿದ್ದಾರಲ್ಲಾ, ಅಲ್ಲೆಲ್ಲಾ ರೈತರಿಗೆ ಎಷ್ಟು ಪರಿಹಾರ ಕೊಟ್ಟಿದ್ದಾರೆ ಗೊತ್ತಾ? ಎಕರೆಗೆ ಕೇವಲ ₹ 30 ಸಾವಿರ, ₹ 50 ಸಾವಿರ, ₹ 1 ಲಕ್ಷದಂತೆ ಪರಿಹಾರ ಕೊಟ್ಟಿದ್ದಾರೆ’ ಎಂದರು.
ಪಾದಯಾತ್ರೆ ಮತ್ತೆ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗೆ, ‘ಪರಿಸ್ಥಿತಿ ಸುಧಾರಿಸಲಿ, ಸರ್ಕಾರ 10 ಜನರನ್ನು ಬಿಟ್ಟರೆ 10 ಜನ, ನೂರು ಜನರನ್ನು ಬಿಟ್ಟರೆ ನೂರು ಜನ ಪಾದಯಾತ್ರೆ ಮಾಡುತ್ತೇವೆ. ಪಾದಯಾತ್ರೆ ಮಾಡುವ ಸಂಕಲ್ಪ ಯಾವಾಗಲೋ ಆಗಿದೆ’ ಎಂದರು.
‘ಪಾದಯಾತ್ರೆ ಯಶಸ್ಸಿಗಾಗಿ ನೀವು ಬಿಜೆಪಿಯ ಗುರಿ ಆಗುತ್ತೀರಾ’ಎಂಬ ಪ್ರಶ್ನೆಗೆ, ‘ಮೇಕೆದಾಟು ಮಾಡಲಿ ಬಿಡಲಿ, ನನ್ನ ಮೇಲೆ ಅವರು ಏನೆಲ್ಲ ಪ್ರಯೋಗ ಮಾಡಬಹುದೋ ಅದನ್ನು ಮಾಡುತ್ತಿದ್ದಾರೆ. ಈಗ ನನ್ನ ಮಗಳು ಹೇಳುತ್ತಿದ್ದಾಳೆ, ನಮ್ಮ ಶಾಲೆಗೂ ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು. ಇದಕ್ಕೆ ಕೊನೆ ಇಲ್ಲ, ನಾವು ಇದರ ಜತೆಯೇ ಬದುಕಿ, ಸಾಯಲು ಸಿದ್ಧರಿದ್ದೇವೆ. ಇದನ್ನು ಎದುರಿಸದೆ ಬೇರೆ ಏನೂ ಮಾಡಲು ಆಗುವುದಿಲ್ಲ. ಕೇಸ್ ಹಾಕುವುದಾದರೆ ಒಟ್ಟಿಗೆ ಹಾಕಬಹುದು. ದಿನಾ ಒಂದೊಂದು ಕೇಸ್ ಯಾಕೆ ಹಾಕುತ್ತಾರೆ? ಎಲ್ಲರ ಮೇಲೂ ಕೇಸ್ ಹಾಕಬಹುದಲ್ಲಾ? ಯಾಕೆ ಬಿಜೆಪಿ ನಾಯಕರ ಮೇಲೆ ಕೇಸ್ ಇಲ್ಲ? ಬಿಜೆಪಿ ಕಾರ್ಯಕ್ರಮಗಳಲ್ಲಿ ಕೇವಲ 30 ಜನ ಮಾತ್ರ ಇದ್ದರಾ? ಅವರು ನನ್ನನ್ನು ಜೈಲಿಗೆ ಹಾಕಿ ಖುಷಿ ಪಡಬಹುದು, ಪಡಲಿ ಬಿಡಿ’ ಎಂದರು.
‘ರಾಮನಗರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಂದ ದಿನವೇ ಕೋವಿಡ್ ನಿರ್ಬಂಧದ ಆದೇಶ ಬಂದಿದೆ. ಅದರ ಮೇಲೆ ಕೇಸ್ ದಾಖಲಾಗಬೇಕು ಅಲ್ಲವೇ? ವಿಧಾನಸೌಧ ಕಾರ್ಯಕ್ರಮದ ವಿರುದ್ಧ ಕೇಸ್ ಹಾಕಲಿ. ಪೊಲೀಸ್ ಕಮಿಷನರ್ ಅವರು ತಮ್ಮ ವೃತ್ತಿ, ಸ್ಥಾನ ಹಾಗೂ ಸಮವಸ್ತ್ರಕ್ಕೆ ಗೌರವ ನೀಡುವುದಾದರೆ ಅಲ್ಲಿಗೆ ಬಂದಿದ್ದ ಎಲ್ಲರ ಮೇಲೂ ಕೇಸ್ ದಾಖಲಿಸಲಿ. ರಾಮನಗರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಇತ್ತಾ? ಜನಾಶೀರ್ವಾದ ಯಾತ್ರೆ ವಿಚಾರದಲ್ಲಿ ಮಂತ್ರಿಗಳ ವಿರುದ್ಧ ಯಾಕೆ ಕ್ರಮ ಇಲ್ಲ?’ ಎಂದು ಮರುಪ್ರಶ್ನಿಸಿದರು.
ನೀವು ಕಾನೂನು ಹೋರಾಟ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘ನಾವು ಎಲ್ಲ ಮನವಿ ಸಲ್ಲಿಸಿದ್ದೇವೆ, ನ್ಯಾಯಾಲಯದ ಮೊರೆ ಹೋಗುತ್ತೇವೆ, ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ನಮಗೂ ಒಂದು ಕಾಲ ಬರುತ್ತದೆ. ಈಗ ಅದರ ಬಗ್ಗೆ ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ’ ಎಂದರು.
ಪಾದಯಾತ್ರೆ ಬಾವುಟ ಕಟ್ಟಲು ತಮಿಳುನಾಡಿನ ಕಾರ್ಮಿಕರು ಬಂದಿದ್ದಾರೆ ಎಂಬ ಕುಮಾರಸ್ವಾಮಿಯವರ ಟೀಕೆಗೆ, ‘ತಮಿಳುನಾಡಿನ ಜನ ನಮ್ಮ ಸಹೋದರರು, ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ. ಬೆಂಗಳೂರಿನ ಅನೇಕ ಜನ ಹೊಸೂರಿನಲ್ಲಿ ಕೆಲಸ ಮಾಡಿ ಬರುತ್ತಿದ್ದಾರೆ. ತಮಿಳುನಾಡು ಜನರಿಗೆ ನಾವು ಶಿಕ್ಷಣ ನೀಡುತ್ತಿದ್ದೇವೆ. ಗಡಿಯಲ್ಲಿ ನಾವು ಕಿತ್ತಾಡಬೇಕಾ? ನಮ್ಮ ಜಮೀನು ಅವರ ಜಮೀನು ಅಕ್ಕಪಕ್ಕ ಇದೆ. ಅವರು ಬಂದು ಇಲ್ಲಿ ಕೆಲಸ ಮಾಡಬಾರದೆ? ಇವರು ಹೊರ ರಾಜ್ಯದವರನ್ನು ಕೆಲಸಕ್ಕೆ ಇಟ್ಟುಕೊಂಡಿಲ್ಲವೇ? ಒಂದೊಂದು ರಾಜ್ಯದಲ್ಲೂ ಒಂದೊಂದು ಕೌಶಲ್ಯದ ಕಾರ್ಮಿಕರಿದ್ದಾರೆ. ಬಿಹಾರದಿಂದ ಉತ್ತಮ ಬಡಗಿ ಬರುತ್ತಾರೆ. ಮೈಸೂರು ಭಾಗದಲ್ಲಿ ಇನ್ನು ಕಾರ್ಮಿಕರಿದ್ದಾರೆ. ಮುಂಚೆ ತಮಿಳುನಾಡಿನಿಂದ ಕಾರ್ಮಿಕರು ಬರುತ್ತಿದ್ದರು, ಈಗ ಉತ್ತರ ಭಾರತದ ರಾಜ್ಯಗಳಿಂದ ಬರುತ್ತಿದ್ದಾರೆ. ಮುಂಚೆ ತಮಿಳುನಾಡು, ಆಂಧ್ರಪ್ರದೇಶಗಳಿಂದ ಭಟ್ಟರು ಬರುತ್ತಿದ್ದರು. ಈಗ ಅವರು ಎಲ್ಲಿದ್ದಾರೆ? ಅವರು ಸುಮ್ಮನೆ ತಮ್ಮ ಚಪಲಕ್ಕೆ ಮಾತನಾಡುತ್ತಾರೆ’ ಎಂದರು.
ರೇಣುಕಾಚಾರ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂಬ ಪ್ರಶ್ನೆಗೆ, ‘ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾವು ಸರ್ಕಾರದ ಜತೆಗೆ ಅಧಿಕಾರಿಗಳ ವಿರುದ್ಧವೂ ಹೋರಾಡಬೇಕಾಗುತ್ತದೆ’ ಎಂದರು.
‘ಶಿವಕುಮಾರ್ ಅವರು ಬೇಲ್ ಮೂಲಕ ಆಚೆ ಇದ್ದಾರೆ’ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ, ‘ಯಡಿಯೂರಪ್ಪ ಅವರು ಹೇಗೆ ಇದ್ದರಂತೆ?’ ಎಂದು ಪ್ರಶ್ನಿಸಿದರು.
ಕೋವಿಡ್ ಪರೀಕ್ಷೆ ಮಾಡಿಸಲಿ ಎಂದು ಬಿಜೆಪಿ ಸವಾಲೆಸೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಕಾಯಿಲೆ ಇರುವವರು ಆಸ್ಪತ್ರೆಗೆ ಹೋಗಬೇಕು. ಅವರಿಗೆ ಇದ್ದರೆ ಅವರು ಹೋಗಿ ಪರೀಕ್ಷೆ ಮಾಡಿಸಿಕೊಳ್ಳಲಿ’ ಎಂದರು.
ಪಾದಯಾತ್ರೆಗೆ ರಕ್ಷಣೆ ನೀಡಿದ್ದ ಪೊಲೀಸರಲ್ಲಿ ಸೋಂಕು ಹೆಚ್ಚಾಗಿದೆ ಎಂಬ ಪ್ರಶ್ನೆಗೆ, ‘ಬಸವ ಕಲ್ಯಾಣದಲ್ಲಿ ನಡೆದ ಉಪಚುನಾವಣೆ ಸಮಯದಲ್ಲಿ ಶಿಕ್ಷಕರಿಗೆ ಸೋಂಕು ಹರಡಿದ್ದು, 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಅದಕ್ಕೆ ನಾವು ಕಾರಣವೇ?’ ಎಂದು ಪ್ರಶ್ನಿಸಿದರು.
UP Elections: ‘ಬಿಕಿನಿ ಗರ್ಲ್’ಗೆ ಟಿಕೆಟ್ ನೀಡಿ ಕಿಡಿ ಹೊತ್ತಿಸಿದ ಕಾಂಗ್ರೆಸ್!
Read more from source
[wpas_products keywords=”deal of the day sale today kitchen”]