Source : Online Desk
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ವಾರಾಣಸಿಗೆ ತೆರಳಿದ್ದಾರೆ.
ವಾರಣಾಸಿಗೆ ತೆರಳುವ ಮುನ್ನ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಾರಾಣಸಿಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸಿ ಹಿಂದಿರುಗುವುದಾಗಿ ತಿಳಿಸಿದರು.
ಇದನ್ನು ಓದಿ: ಬೆಳಗಾವಿ ಅಧಿವೇಶನ: ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಯ ಸುಳಿವು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿಗಳ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. ಹಲವು ಯೋಜನೆಗಳನ್ನು ಪರಿಣಾಮಕಾರಿಯಾಗಿ ಹೇಗೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಚರ್ಚೆಯಾಗಲಿದೆ ಎಂದರು.
ಈ ಸಭೆಯಲ್ಲಿ ಭಾಗವಹಿಸಿ ನಾಳೆ ಸಂಜೆ ಬೆಳಗಾವಿಗೆ ಹಿಂದಿರುಗಿ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಾಗಿ ಸಿಎಂ ತಿಳಿಸಿದರು.