Karnataka news paper

ಸಂಸ್ಕೃತ ವಿವಿ ವಿರೋಧಿಸಿ ಟ್ವಿಟರ್ ಅಭಿಯಾನ


ಬೆಂಗಳೂರು: ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದ್ದು, ಇದೇ ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. 

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ 100 ಎಕರೆ ಪ್ರದೇಶವನ್ನು ಸಂಸ್ಕೃತ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಗುರುತಿಸಲಾಗಿದೆ. ₹ 320 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯನ್ನು ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದ್ದರು. ಇದನ್ನು ವಿರೋಧಿಸಿರುವ ರಕ್ಷಣಾ ವೇದಿಕೆ, ‘#ಸಂಸ್ಕೃತವಿವಿಬೇಡ’ ಮತ್ತು ‘#SayNoToSanskrit’ ಎಂಬ ಶೀರ್ಷಿಕೆಯಡಿ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. 

‘ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಬೇಕಾಗಿಲ್ಲ. ಹಿಂದೆ ಇದೇ ಸಂಸ್ಕೃತ ಹೇರಿಕೆ ವಿರುದ್ಧ ರಾಜ್‌ಕುಮಾರ್ ಅವರ ನೇತೃತ್ವದಲ್ಲಿ ಗೋಕಾಕ್ ಚಳವಳಿ ನಡೆಸಲಾಗಿತ್ತು. ಈಗ ಮತ್ತೆ ಅಂತಹದ್ದೇ ಕಾಲ ಬಂದಿದೆ’ ಎಂದು ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಟ್ವೀಟ್ ಮಾಡಿದ್ದಾರೆ.

 



Read more from source

[wpas_products keywords=”deal of the day sale today kitchen”]