Online Desk
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 32,793 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 31,86,040ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ 7 ಮಂದಿ ಕೊರೋನಾಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 38,418ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕನ್ನಡಪ್ರಭ.ಕಾಮ್ ಯೂಟ್ಯೂಬ್ ಚಾನಲ್ ಗಾಗಿ ಇಲ್ಲಿ ಕ್ಲಿಕ್ಕಿಸಿ
ಬೆಂಗಳೂರಿನಲ್ಲಿ 22,284 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1,395,736ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಕೊರೋನಾಗೆ 7 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 4,273 ಸೋಂಕಿತರ ಚೇತರಿಸಿಕೊಂಡಿದ್ದು ಒಟ್ಟಾರೆ ಚೇತರಿಕೆ ಸಂಖ್ಯೆ 2,977,743ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆಯಾಗಿದ್ದು ಬೆಂಗಳೂರು ಒಂದರಲ್ಲೇ 1 ಲಕ್ಷದ 29 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.15ರಷ್ಟಿದೆ. ಇಂದು ಒಟ್ಟು 2,18,479 ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ.
Test positivity rate rises to 15% in the State as cases near 33k:
◾New cases in State: 32,793
◾New cases in B’lore: 22,284
◾Positivity rate in State: 15%
◾Discharges: 4,273
◾Active cases State: 1,69,850 (B’lore- 129k)
◾Deaths:07 (B’lore- 05)
◾Tests: 2,18,479#COVID19— Dr Sudhakar K (@mla_sudhakar) January 15, 2022
Read more
[wpas_products keywords=”deal of the day”]