Karnataka news paper

ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೋನಾ ಪಾಸಿಟಿವ್!


The New Indian Express

ಕೋಲಾರ/ಚಿಕ್ಕಬಳ್ಳಾಪುರ: ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಕೋಲಾರ, ಕೆಜಿಎಫ್ ಮತ್ತು ಚಿಕ್ಕಬಳ್ಳಾಪುರದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ. 

ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಸೋಂಕಿತರ ಪ್ರತ್ಯೇಕತೆ ಮತ್ತು ಚಿಕಿತ್ಸೆಗಾಗಿ ಕೂಡಲೇ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲು ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಪಾದಯಾತ್ರೆ ವೇಳೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರವನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ವೈದ್ಯಕೀಯ ವರದಿ ನೆಗೆಟಿವ್ ಬರುವವರೆಗೂ ಎಲ್ಲರನ್ನೂ ಐಸೋಲೇಷನ್ ನಲ್ಲಿ ಇರಿಸಲಾಗುತ್ತಿದೆ ಎಂದು ಐಜಿಪಿ ಎಂ ಚಂದ್ರಶೇಖರ್ ಅವರು ಹೇಳಿದ್ದಾರೆ. 

ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಮಗನಿಗೆ ಸೋಂಕು ತಗುಲಿದ ಬಳಿಕ ಕುಟುಂಬ ಸಾಕಷ್ಟು ಸಮಸ್ಯೆಗೆ ಸಿಲುಕಿದ್ದು, ಎಲ್ಲರೂ ಚಿಂತೆಗೀಡಾಗಿದ್ದಾರೆ, ನನ್ನ ಮಗ ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದಾನೆ. ಆರೋಗ್ಯವಾಗಿದ್ದಾನೆಂದು ಸೋಂಕು ತಗುಲಿದ ಪೊಲೀಸ್ ಸಿಬ್ಬಂದಿಯೊಬ್ಬರ ತಂದೆ ಮಾಹಿತಿ ನೀಡಿದ್ದಾರೆ. 

ಮೂಲಗಳ ಪ್ರಕಾರ, ಕೋಲಾರದ 110 ಪೊಲೀಸರ ಪೈಕಿ ಈ ವರೆಗೂ 43 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 25 ಮಂದಿಗೆ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. 

ಕೆಜಿಎಫ್‌ನಿಂದ ಕರ್ತವ್ಯದಲ್ಲಿದ್ದ 110 ಸಿಬ್ಬಂದಿಯಲ್ಲಿ 60 ಸಿಬ್ಬಂದಿಯನ್ನು ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 20 ಮಂದಿಗೆ ಪಾಸಿಟಿವ್ ಬಂದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಪರೀಕ್ಷೆಗೊಳಪಟ್ಟಿದ್ದ 125 ಪೊಲೀಸರ ಪೈಕಿ 10 ಮಂದಿಗೆ ಪಾಸಿಟಿವ್ ಬಂದಿದೆ ಎಂದು ವರದಿಗಳು ತಿಳಿಸಿವೆ. 



Read more

[wpas_products keywords=”deal of the day”]