Online Desk
ಶಿವಮೊಗ್ಗ: ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ.
ಆರಗ ಜ್ಞಾನೇಂದ್ರ ಅವರು ನಿನ್ನೆ ತೀರ್ಥಹಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಬಿ.ಆರ್.ಪಿ ಬಳಿಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ದ್ವಿಚಕ್ರವಾಹನ ಸವಾರರನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.
ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದ ಗೃಹ ಸಚಿವರು, ನಿನ್ನೆ ಸಂಜೆ ತೀರ್ಥಹಳ್ಳಿಗೆ ವಾಪಸ್ ಆಗುತ್ತಿದ್ದರು.
ಈ ವೇಳೆ ಬಿ.ಆರ್.ಪಿ ಬಳಿಯ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಹಸುವಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಡ- ಹೆಂಡತಿ ಹಾಗೂ ಮಗು ಗಾಯಗೊಂಡಿದ್ದರು.
ಇದನ್ನು ಗಮನಿಸಿದ ಗೃಹ ಸಚಿವರು ತಮ್ಮ ಕಾರನ್ನು ನಿಲ್ಲಿಸಿ, ಸ್ವತಃ ತಾವೇ ಗಾಯಾಳುಗಳನ್ನು ಉಪಚರಿಸಿ, ಅವರ ವಾಹನದಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ಮಾನವೀಯತೆ ಮೆರೆದರು. ಸಚಿವರು ಗಾಯಾಳುಗಳನ್ನು ತಾವೇ ಖುದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿರುವುದಕ್ಕೆ ಇದೀಗ ಸಾರ್ವಜನಿಕ ವಲಯದಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.
Read more
[wpas_products keywords=”deal of the day”]