Online Desk
ಬೆಂಗಳೂರು: ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾಪಿಂಗ್ ಮಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.
ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್’ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್ ಎಂದು ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ತನ್ನ ಕೆನ್ನಾಲಿಗೆಯನ್ನು ಇತರೆಡೆ ಹರಡಲು ಆರಂಭಿಸಿತು. ಪರಿಣಾಮ ಮಾಲ್ನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟುಕರಕಲಾಗಿವೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಆರು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿಯನ್ನ ನಿಯಂತ್ರಣಕ್ಕೆ ತಂದರು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿತ್ತು ಎಂಬ ಶಂಕೆಗಳು ವ್ಯಕ್ತವಾಗಿದೆ.
Read more
[wpas_products keywords=”deal of the day”]