The New Indian Express
ಡೆಹ್ರಾಡೂನ್: ಧರ್ಮ ಸಂಸದ್ ನಲ್ಲಿ ಮುಸ್ಲಿಮರ ವಿರುದ್ಧದ ದ್ವೇಷಪೂರಿತ ಹೇಳಿಕೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ್ ಪೊಲೀಸರು ಯತಿ ನರಸಿಂಹಾನಂದರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಜಿತೇಂದ್ರ ನಾರಾಯಣ್ ತ್ಯಾಗಿ ಎಂಬುವವರನ್ನು ಬಂಧಿಸಿರುವುದನ್ನು ವಿರೋಧಿಸಿ ಯತಿ ನರಸಿಂಹಾನಂದ ಹರಿದ್ವಾರದಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದರು ಈ ವೇಳೆ ಅವರನ್ನು ಪೊಲೀಸರು ಅವರನ್ನು ಠಾಣೆಗೆ ಕರೆತಂದಿದ್ದಾರೆ.
ಉತ್ತರಾಖಂಡ್ ಪೊಲೀಸರು ಈ ಬಗ್ಗೆ ಮಾತನಾಡಿದ್ದು, ಇದು ತಾಂತ್ರಿಕವಾಗಿ ಬಂಧನವಲ್ಲ ಎಂಬ ಸ್ಪಷ್ಟನೆ ನೀಡಿದ್ದಾರೆ.
ಘಾಜಿಯಾಬಾದ್ ನ ದಸ್ನಾ ದೇವಾಲಯದ ಅರ್ಚಕರಾಗಿರುವ ನರಸಿಂಹಾನಂದ ಹರಿದ್ವಾರದಲ್ಲಿ ಡಿ.17-19 ವರೆಗೆ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಹೇಳಿಕೆಗಳನ್ನು ನೀಡಲಾಗಿತ್ತು.
ಜಿತೇಂದ್ರ ನಾರಾಯಣ್ ತ್ಯಾಗಿ ಈ ಹಿಂದೆ ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ನ ಅಧ್ಯಕ್ಷರಾಗಿದ್ದ ವಸೀಮ್ ರಿಜ್ವಿ ಆಗಿದ್ದು, ಮುಸ್ಲಿಮರ ವಿರುದ್ಧದ ದ್ವೇಷಪೂರಿತ ಹೇಳಿಕೆಗಳ ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮೊದಲ ವ್ಯಕ್ತಿಯಾಗಿದ್ದಾರೆ. ಅವರು ಇತ್ತೀಚೆಗೆ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದರು.
Read more
[wpas_products keywords=”deal of the day”]