Karnataka news paper

ವಿಧಾನಸಭೆ ಚುನಾವಣೆ: ಸಾರ್ವಜನಿಕ ರ್ಯಾಲಿಗಳು, ರೋಡ್ ಶೋ ರದ್ದು ನಿರ್ಧಾರ ಪುನರ್ ಪರಿಶೀಲನೆಗೆ ಚುನಾವಣಾ ಆಯೋಗ ನಿರ್ಧಾರ?


The New Indian Express

ನವದೆಹಲಿ: ಕೋವಿಡ್ ಹರಡುವಿಕೆ ಹಿನ್ನೆಲೆಯಲ್ಲಿ ಚುನಾವಣಾ ಹೊಸ್ತಿಲಲ್ಲಿರುವ ಪಂಚರಾಜ್ಯಗಳಲ್ಲಿ ಸಾರ್ವಜನಿಕ ರ್ಯಾಲಿ, ರೋಡ್ ಶೋ ರದ್ದುಗೊಳಿಸಿದ್ದ ಕೇಂದ್ರ ಚುನಾವಣಾ ಆಯೋಗ, ತನ್ನ ನಿರ್ಧಾರವನ್ನು ಪುನರ್ ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಜನವರಿ 8 ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರಕ್ಕೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಚುನಾವಣಾ ಆಯೋಗ, ಜನವರಿ 15 ರವರೆಗೆ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಪ್ರಚಾರ ಕಾರ್ಯಕ್ರಮಗಳ ಮೇಲೆ ನಿಷೇಧ ಹೇರಿತ್ತು. 

ಇದೀಗ ಈ ನಿರ್ಧಾರವನ್ನು ಪುನರ್ ಪರಿಶೀಲನೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದ್ದು, ಶನಿವಾರ ಸಭೆ ಕರೆದಿದೆ. ಸಭೆಯಲ್ಲಿ ಈ ಕುರಿತು ಮಾತುಕತೆ ನಡೆಸಲಿದೆ ಎಂದು ತಿಳಿದುಬಂದಿದೆ. 

ಸಭೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ, ಚುನಾವಣೆ ಎದುರಿಸಲಿರುವ ಐದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೂ ಕೂಡ ಭಾಗಿಯಾಗಲಿದ್ದು, ರಾಜ್ಯಗಳ ಪರಿಸ್ಥಿತಿ ಆಧರಿಸಿ ಚುನಾವಣಾ ರ್ಯಾಲಿ ಹಾಗೂ ಸಮಾವೇಶಗಳ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ವರದಿಗಳು ತಿಳಿಸಿವೆ. 



Read more

[wpas_products keywords=”deal of the day”]