PTI
ಮುಂಬೈ: ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಅವರು ಮುಂಬೈನ ಆಸ್ಪತ್ರೆಯೊಂದರಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಭಾನುವಾರ ತಿಳಿಸಿದ್ದಾರೆ.
92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಕಳೆದ ವಾರ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗಿದ್ದರು.
ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿರುವುದಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಡಾ.ಪ್ರತಿತ್ ಸಮ್ದಾನಿ ಪಿಟಿಐಗೆ ತಿಳಿಸಿದ್ದಾರೆ.
ಲತಾ ಮಂಗೇಶ್ಕರ್ ಉತ್ತಮವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಗುರುವಾರ ತಿಳಿಸಿದ್ದ ಅವರ ಸೊಸೆ ರಚನಾ ಶಾ, ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮಗಳಿಗೆ ವಿನಂತಿಸಿದ್ದರು.
ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942 ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಹಲವಾರು ಭಾರತೀಯ ಭಾಷೆಗಳಲ್ಲಿ 30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
Read more
[wpas_products keywords=”deal of the day”]