ಬೆಂಗಳೂರು: ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ವೇಳೆಗೆ ಹೊರಬೀಳಲಿದೆ. ಕಳೆದ ಡಿಸೆಂಬರ್ ಹತ್ತರಂದು ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ವಿಧಾನ ಪರಿಷತ್ ಸಭಾನಾಯಕ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೇರಿದಂತೆ ಒಟ್ಟು 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ ಎಂಟರಿಂದ ಮತ ಎಣಿಕೆ ಕಾರ್ಯ ಆರಂಭವಾಗಿ, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಪೂರ್ಣ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ. ಇಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
8.12 am: ಮಡಿಕೇರಿಯ ಸೈಂಟ್ ಜೋಸೆಫ್ ಕಾಲೇಜಿನಲ್ಲಿ ಆರು ಟೇಬಲ್‌ಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
8.05 am: ಮಂಗಳೂರಿನ ರೊಸಾರಿಯೋ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭ. 14 ಟೇಬಲ್‌ಗಳಲ್ಲಿ 28 ಸುತ್ತುಗಳಲ್ಲಿ ನಡೆಯಲಿರುವ ಮತ ಎಣಿಕೆ ಪ್ರಕ್ರಿಯೆ ಶುರು
8.00 am: ರಾಯಚೂರಿನ ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ಓಪನ್. ಅಧಿಕಾರಿಗಳು ಮತಪೆಟ್ಟಿಗೆಯನ್ನು ಮತ ಎಣಿಕೆ ಕೊಠಡಿಗೆ ರವಾನಿಸಿದ್ದಾರೆ.
7.50 am: ತುಮಕೂರು, ಹಾಸನ, ರಾಯಚೂರು, ಹಾವೇರಿ, ಹುಬ್ಬಳ್ಳಿ, ಉಡುಪಿ, ಮೈಸೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಕಡೆ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದೆ.
7.45 am: ಮಂಗಳೂರಿನಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಿದ ಅಧಿಕಾರಿಗಳು
7.40 am: ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಅಧಿಕಾರಿಗಳು