ಹೈಲೈಟ್ಸ್:
- ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಏಕಂಬಾ ಬಳಿಯಿರುವ ಚೆಕ್ ಪೋಸ್ಟ್
- ಕರ್ನಾಟಕ – ಮಹಾರಾಷ್ಟ್ರ ಗಡಿಯ ಚೆಕ್ ಪೋಸ್ಟ್‌ಗೆ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಪರಿಶೀಲನೆ
- ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚನೆ
ಚೆಕ್‌ಪೋಸ್ಟ್‌ನ ಸಿಬ್ಬಂದಿ ಬಗ್ಗೆ ಮಾಹಿತಿ ಪಡೆದರು. ಪಾಳಿಯಲ್ಲಿ ನಿರತರಾಗಿರುವ ಸಿಬ್ಬಂದಿ ಹಾಗೂ ಅವರು ನಿರ್ವಹಿಸುತ್ತಿರುವ ಕಾರ್ಯಗಳ ಬಗ್ಗೆ ದಿನಚರಿಯನ್ನು ವೀಕ್ಷಿಸಿದರು. ಪ್ರತಿ ದಿನ ಎಷ್ಟು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎನ್ನುವ ಬಗ್ಗೆ ವಿವರ ಪಡೆದುಕೊಂಡರು.
ಕೋವಿಡ್ ಹಾಗೂ ರೂಪಾಂತರಿ ಓಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಜಿಲ್ಲೆಯೊಳಗಡೆ ಮಹಾರಾಷ್ಟ್ರದಿಂದ ಪ್ರವೇಶಿಸುವ ಪ್ರತಿಯೊಂದು ವಾಹನವನ್ನು ಮತ್ತು ಎಲ್ಲ ಜನರನ್ನು ತಪಾಸಣೆಗೆ ಒಳಪಡಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಸೂಚಿಸಿದರು.
ಮುಖಂಡರಾದ ರಾಮಶೆಟ್ಟಿ ಪನ್ನಾಳೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
‘ಬೀದರ್ ಜಿಲ್ಲೆಯ ಮಹಾರಾಷ್ಟ್ರದ ಗಡಿಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್‌ಗಳಲ್ಲಿ ಸೂಕ್ತ ಪರಿಶೀಲನೆ ನಡೆಯಬೇಕು. ಕಡ್ಡಾಯವಾಗಿ ಜಿಲ್ಲೆಯ ಜನ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಅರ್ಹರೆಲ್ಲರೂ ಕೋವಿಡ್ – 19 ವೈರಸ್ ನಿರೋಧಕ ಲಸಿಕೆಯನ್ನು ಪಡೆಯಬೇಕು. ಕೋವಿಡ್ ಮೂರನೇ ಅಲೆಯನ್ನು ನಿಯಂತ್ರಿಸಲು ಜಿಲ್ಲೆಯ ಜನರು ಆಡಳಿತಕ್ಕೆ ಸಹಕಾರ ನೀಡಬೇಕು’ ಎಂದು ಬೀದರ್ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
238 ಪ್ರಕರಣ ದಾಖಲು, 69 ವಾಹನ ಜಪ್ತಿ
ಕೋವಿಡ್ – 19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ಸೋಂಕು ಇತರರಿಗೆ ಹರಡದಂತೆ ತಡೆಯಲು ಜಾರಿಗೊಳಿಸಲಾಗಿರುವ ವೀಕೆಂಡ್ ಕಫ್ರ್ಯೂನ ಆದೇಶ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯಲ್ಲಿ ಭಾನುವಾರ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ. ಜನವರಿ 16ರಂದು ಫೇಸ್ ಮಾಸ್ಕ್ ಹಾಕದ ಜನರ ವಿರುದ್ಧ ಒಟ್ಟು 238 ಪ್ರಕರಣಗಳನ್ನು ದಾಖಲಿಸಿ, ಅನಾವಶ್ಯಕವಾಗಿ ಸಂಚರಿಸುತ್ತಿದ್ದ 69 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ. ಎಲ್. ತಿಳಿಸಿದ್ದಾರೆ. ವೀಕೆಂಡ್ ಕಫ್ರ್ಯೂ ವೇಳೆ ಹಾಗೂ ನೈಟ್ ಕಫ್ರ್ಯೂ ವೇಳೆ ಸಾರ್ವಜನಿಕರು ಮನೆಯಲ್ಲಿಯೇ ಇರಬೇಕು. ಅತ್ಯವಶ್ಯಕ, ತುರ್ತು ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗಡೆ ಬರುವಾಗ ಫೇಸ್ ಮಾಸ್ಕ್ ಹಾಕಿಕೊಳ್ಳಬೇಕು. ಅನಾವಶ್ಯಕವಾಗಿ ಸಂಚರಿಸಿದವರ ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯ ಜರುಗಿಸಲಾಗುತ್ತಿದೆ. ಇನ್ನು ಮುಂದೆ ಸಾರ್ವಜನಿಕರು ಕಫ್ರ್ಯೂ ಆದೇಶವನ್ನು ಉಲ್ಲಂಘಿಸಿದರೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Read more
[wpas_products keywords=”deal of the day sale today offer all”]