
ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೇಶ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ 4GB RAM + 64GB ಮತ್ತು 6GB + 128GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಆರಂಭಿಕ ಬೆಲೆ 13,999ರೂ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ 9i ಸ್ಮಾರ್ಟ್‌ಫೋನ್ 1,080×2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.1:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡ್ರ್ಯಾಗನ್ ಟ್ರಯಲ್ ಪ್ರೊ ಗ್ಲಾಸ್ ಪ್ರೊಟೆಕ್ಷನ್ ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ರಿಯಲ್‌ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. 4GB RAM + 64GB ಮತ್ತು 6GB + 128GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 9i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಈ ವೇಗದ ಚಾರ್ಜಿಂಗ್ ತಂತ್ರಜ್ಞಾನವು 70 ನಿಮಿಷಗಳಲ್ಲಿ ಶೂನ್ಯದಿಂದ 100 ಪ್ರತಿಶತದಷ್ಟು ಚಾರ್ಜ್ ಅನ್ನು ಒದಗಿಸುತ್ತದೆ ಎಂದು ಹೇಳಲಾಗುತ್ತದೆ. ಅಂತರ್ಗತ ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ 48.4 ಗಂಟೆಗಳ ಟಾಕ್ ಟೈಮ್ ಅಥವಾ 995 ಗಂಟೆಗಳ ಸ್ಟ್ಯಾಂಡ್‌ಬೈ ಸಮಯವನ್ನು ತಲುಪಿಸಲು ರೇಟ್ ಮಾಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರಕ್ಕಾಗಿ 13,999.ರೂ ಬೆಲೆ ಹೊಂದಿದೆ. ಇನ್ನು 6GB + 128GB ಮಾದರಿಯ ಆಯ್ಕೆಯ ಬೆಲೆ 15,999.ರೂ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪ್ರಿಸ್ಮ್ ಬ್ಲಾಕ್ ಮತ್ತು ಪ್ರಿಸ್ಮ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್ ಜನವರಿ 25 ರಿಂದ ಫ್ಲಿಪ್ಕಾರ್ಟ್, ರಿಯಲ್‌ಮಿ,ಕಾಮ್ ಮತ್ತು ದೇಶದ ಆಫ್‌ಲೈನ್ ರಿಟೇಲ್ ಸ್ಟೋರ್ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಆದರೆ, ಇದರ ಆರಂಭಿಕ ಮಾರಾಟವು ಜನವರಿ 22 ರಂದು ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ.ಕಾಮ್‌ನಲ್ಲಿ ಮಾತ್ರ ನಡೆಯಲಿದೆ.
Read more…
[wpas_products keywords=”smartphones under 15000 6gb ram”]