ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರದ ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜಿನಲ್ಲಿ ಮನೋವಿಜ್ಞಾನ ಮತ್ತು ಫುಡ್ ಅಂಡ್ ನ್ಯೂಟ್ರಿಷಿಯನ್ ಸ್ನಾತಕೋತ್ತರ ಕೋರ್ಸ್‌ಗಳನ್ನು ಆರಂಭಿಸಬೇಕು ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಮಂಗಳವಾರ ಧರಣಿ ನಡೆಸಿದರು.
ಇವೆರಡೂ ಕೋರ್ಸ್‌ಗಳನ್ನು ಆರಂಭಿಸಲು ಉನ್ನತ ಅಧಿಕಾರಿಗಳು ಅನುಮತಿ ನೀಡಿದ್ದರೂ, ಉನ್ನತ ಶಿಕ್ಷಣ ಸಚಿವರು ಅನುಮತಿ ನೀಡಲು ನಿರಾಕರಿಸಿದ್ದಾರೆ ಎಂದು ರೇವಣ್ಣ ದೂರಿದರು.
ಇವೆರಡೂ ಕೋರ್ಸ್‌ಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಗತ್ಯವಿದೆ. ಈ ಕೋರ್ಸ್‌ಗಳ ಬೋಧನೆಗೆ ಉಪನ್ಯಾಸಕರಿಗೆ ನೀಡಬೇಕಾಗುವ ವೇತನ ವೆಚ್ಚವನ್ನು ತಾತ್ಕಾಲಿಕವಾಗಿ ಸಿಡಿಸಿ ಸಮಿತಿ ಅಥವಾ ಸ್ವಂತ ಖರ್ಚಿನಲ್ಲಿ ಭರಿಸುವುದಾಗಿ ರೇವಣ್ಣ ಹೇಳಿದರು.
ಕೋವಿಡ್ ನಿಯಮ ಪಾಲಿಸುವ ನಿಟ್ಟಿನಲ್ಲಿ ಏಕಾಂಗಿಯಾಗಿ ಧರಣಿ ನಡೆಸಿರುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.
Read more from source
[wpas_products keywords=”deal of the day sale today kitchen”]