Karnataka news paper

ದೇಶಿ ಮಾರುಕಟ್ಟೆಯಲ್ಲಿ ಮೋಟೋ ಟ್ಯಾಬ್‌ G70 LTE ಬಿಡುಗಡೆ! ಆಕರ್ಷಕ ಡಿಸ್‌ಪ್ಲೇ ವಿನ್ಯಾಸ!


ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೋಟೋ ಟ್ಯಾಬ್‌ G70 LTE ಅನ್ನು ಬಿಡುಗಡೆ ಮಾಡಿದೆ. ಈ ಟ್ಯಾಬ್ಲೆಟ್‌ 11 ಇಂಚಿನ 2K LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟು-ಟೋನ್ ವಿನ್ಯಾಸವನ್ನು ಹೊಂದಿದ್ದು, ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ ಟ್ಯಾಬ್‌ 7,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ಟರ್ಬೋಪವರ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಹೊಸ ಮೋಟೋ ಟ್ಯಾಬ್‌ G70 LTE ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಮೋಟೋ ಟ್ಯಾಬ್‌ G70 LTE 2,000×1,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 11-ಇಂಚಿನ IPS 2K ಡಿಸ್‌ಪ್ಲೇ ಹೊಂದಿದೆ. ಇದು LCD ಡಿಸ್‌ಪ್ಲೇ ಆಗಿದ್ದು 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಟ್ಯಾಬ್ಲೆಟ್‌ನ ಸ್ಕ್ರೀನ್‌ ಕಡಿಮೆ ನೀಲಿ ಬೆಳಕಿನ ಮಾನ್ಯತೆ ಮತ್ತು ಸುಧಾರಿತ ಐ ಪ್ರೊಟೆಕ್ಷನ್‌ಗಾಗಿ TUV ರೈನ್‌ಲ್ಯಾಂಡ್ ಪ್ರಮಾಣೀಕರಿಸಲ್ಪಟ್ಟಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೋಟೋ ಟ್ಯಾಬ್‌ G70 LTE ಟ್ಯಾಬ್ಲೆಟ್ ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G90T ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೋಟೋ ಟ್ಯಾಬ್‌ G70 LTE ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಜೊತೆಗೆ ಈ ಟ್ಯಾಬ್ಲೆಟ್ f/2.2 ಅಪರ್ಚರ್ ಲೆನ್ಸ್‌ನೊಂದಿಗೆ 8-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ ಟ್ಯಾಬ್‌ G70 LTE 7,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB ಟೈಪ್-ಸಿ ಮೂಲಕ 20W ನಲ್ಲಿ ಟರ್ಬೋಪವರ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಟ್ಯಾಬ್ಲೆಟ್ ಡಾಲ್ಬಿ ಅಟ್ಮಾಸ್ ಬೆಂಬಲದೊಂದಿಗೆ ಕ್ವಾಡ್-ಸ್ಪೀಕರ್ ಸೆಟಪ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ GPS ಮತ್ತು GLONASS ಜೊತೆಗೆ 4G LTE, Wi-Fi ಮತ್ತು Bluetooth v5.1 ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಹಾಲ್-ಎಫೆಕ್ಟ್ ಸೆನ್ಸರ್ ಮತ್ತು ಆಂಬಿಯೆಂಟ್ ಲೈಟ್ ಸೆನ್ಸರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ ಟ್ಯಾಬ್‌ G70 LTE ಟ್ಯಾಬ್ಲೆಟ್‌ ಬೆಲೆ 21,999ರೂ.ಆಗಿದೆ. ಇದು 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿರುತ್ತದೆ. ಈ ಹೊಸ ಟ್ಯಾಬ್ಲೆಟ್ ಮಾಡರ್ನಿಸ್ಟ್ ಟೀಲ್ ಕಲರ್‌ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತದೆ. ಇದು ಇದೇ ಜನವರಿ 22 ರವರೆಗೆ ರಿಪಬ್ಲಿಕ್‌ ಡೇ ಸೇಲ್‌ ಸಮಯದಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಫ್ರೀ ಆರ್ಡರ್‌ಗೆ ಲಭ್ಯವಿದೆ. ಅಲ್ಲದೆ ಗ್ರಾಹಕರು ICICI ಬ್ಯಾಂಕ್ ಕಾರ್ಡ್‌ನಲ್ಲಿ 10% ತ್ವರಿತ ರಿಯಾಯಿತಿಯನ್ನು ಪಡೆಯಬಹುದಾಗಿದೆ.

ಮೊಟೊರೊಲಾ

ಇದಲ್ಲದೆ ಮೊಟೊರೊಲಾ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಮೋಟೋ G51 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು 120Hz ಡಿಸ್‌ಪ್ಲೇಯನ್ನು ಹೊಂದಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ರಾಪಿಡ್ ಚಾರ್ಜಿಂಗ್ ಬೆಂಬಲಿಸಲಿದೆ.



Read more…

[wpas_products keywords=”smartphones under 15000 6gb ram”]