Karnataka news paper

ಕೋವಿಡ್ ಹೆಚ್ಚಳ: ಜನತಾ ಜಲಧಾರೆಯ ಗಂಗಾಯಾತ್ರೆ ಮುಂದೂಡಿಕೆ- ಎಚ್‌.ಡಿ. ಕುಮಾರಸ್ವಾಮಿ


ಬೆಂಗಳೂರು: ಇದೇ 26ರಿಂದ ನಡೆಯಬೇಕಿದ್ದ ಜನತಾ ಜಲಧಾರೆಯ ಗಂಗಾಯಾತ್ರೆಯನ್ನು ಕೋವಿಡ್‌ ಹೆಚ್ಚಳವಾಗುತ್ತಿರುವ ಕಾರಣಕ್ಕೆ ಮುಂದೂಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

‘ಯಾತ್ರೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜನರ ಹಿತದೃಷ್ಟಿಯಿಂದ ಯಾತ್ರೆಯನ್ನು ಮುಂದೂಡಿದ್ದೇವೆ. ಸೋಂಕು ಇಳಿಮುಖವಾದ ಕೂಡಲೇ ಆರಂಭ ಮಾಡುತ್ತೇವೆ. ನಮ್ಮ ಕಾರ್ಯಕ್ರಮದಲ್ಲಿ ಮುಚ್ಚುಮರೆ ಏನೂ ಇಲ್ಲ. ನಮಗೆ ಐದು ವರ್ಷ ಪೂರ್ಣ ಪ್ರಮಾಣದಲ್ಲಿ ಆಡಳಿತ ನಡೆಸಲು ಅಧಿಕಾರ ನೀಡಿದರೆ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ ಎಂಬುದನ್ನು ಜಲಧಾರೆ ಕಾರ್ಯಕ್ರಮದ ಮೂಲಕ ರಾಜ್ಯದ ಮುಂದಿಡುತ್ತೇವೆ’ ಎಂದರು.

‘ಗಂಗಾಯಾತ್ರೆಯನ್ನು ಯಶಸ್ವಿಗೊಳಿಸುವ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ರಾಜ್ಯದ 30 ಜಿಲ್ಲೆಗಳ ಅಧ್ಯಕ್ಷರ ಸಭೆ ನಡೆಸಿದ್ದೇವೆ. ರಾಜ್ಯದ 51 ಸ್ಥಳಗಳಿಂದ ನೀರು ಸಂಗ್ರಹ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ನಡೆಸಬೇಕಾದ ಸಿದ್ಧತೆಗಳ ಬಗ್ಗೆ ಮತ್ತೊಮ್ಮೆ ಮನದಟ್ಟು ಮಾಡಿಕೊಟ್ಟಿದ್ದೇವೆ’ ಎಂದು ಕುಮಾರಸ್ವಾಮಿ ಹೇಳಿದರು.



Read more from source

[wpas_products keywords=”deal of the day sale today kitchen”]