ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು 2021–22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ಏಪ್ರಿಲ್ 16ರಿಂದ ಮೇ 4ರವರೆಗೂ ಪರೀಕ್ಷೆ ನಿಗದಿಪಡಿಸಲಾಗಿದೆ. ಫೆಬ್ರುವರಿ 1ರವರೆಗೆ jdexam.dpue@gmail.com ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 28 ರಿಂದ ಏಪ್ರಿಲ್ 13ರವರೆಗೆ ನಿಗದಿಯಾಗಿದೆ. ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಹೊಣೆಯನ್ನು ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ವಹಿಸಲಾಗಿದೆ.
ಹೋದ ವರ್ಷದಂತೆ ಈ ಬಾರಿಯೂ ಪ್ರಥಮ, ದ್ವಿತೀಯ ಪಿಯುಸಿ ಭಾಷಾ ವಿಷಯಗಳಲ್ಲಿ ಶೇ 30ರಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿದೆ. ಹೀಗಾಗಿ, ಭಾಷಾ ವಿಷಯಗಳಲ್ಲಿ ಶೇ 70ರಷ್ಟು ಪಠ್ಯಕ್ರಮಕ್ಕೆ, ಐಚ್ಛಿಕ ವಿಷಯಗಳಲ್ಲಿ ಶೇ 100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆ ನಡೆಸಲಾಗುತ್ತದೆ.
‘ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳ ಪ್ರಶ್ನೆಪತ್ರಿಕೆ ತಯಾರಿಕೆ ವೇಳೆ ಬಹು ಆಯ್ಕೆಯ ಪ್ರಶ್ನೆಗಳಿಗೆ ಆದ್ಯತೆ ನೀಡಲಾಗುತ್ತದೆ. ಫೆಬ್ರುವರಿ 17ರಿಂದ ಮಾರ್ಚ್ 25ರವರೆಗೆ ಪ್ರಾಯೋಗಿಕ ಹಾಗೂ ಮಾರ್ಚ್ 14ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಉಪನಿರ್ದೇಶಕರ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.
ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ದಿನಾಂಕ;ವಿಷಯ;ಸಮಯ
ಏಪ್ರಿಲ್ 16; ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ; ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30
ಏ.18; ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏ.19; ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್
ಏ.20; ಇತಿಹಾಸ, ಭೌತಶಾಸ್ತ್ರ
ಏ.21; ತಮಿಳು, ತೆಲುಗು, ಮಲಯಾಳ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
ಏ.22; ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏ.23; ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
ಏ.25; ಅರ್ಥಶಾಸ್ತ್ರ
ಏ.26; ಹಿಂದಿ
ಏ.28; ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಏ.29; ಕನ್ನಡ
ಏ.30; ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 2; ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4; ಇಂಗ್ಲಿಷ್
Read more from source
[wpas_products keywords=”deal of the day sale today kitchen”]