Online Desk
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಮತ್ತು ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು 15 ದಿನಗಳ ಹಿಂದೆಯೇ ಜಾರಿಗೆ ತಂದಿದೆ. ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಸೇರಿದಂತೆ ಹಲವು ವಲಯಗಳಲ್ಲಿ 50:50 ರೂಲ್ಸ್ ಗಳನ್ನು ತಂದರೂ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಇತ್ತೀಚೆಗೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಸರ್ಕಾರ ಈ ಹಿಂದೆ ತಂದಿರುವ ಕೊರೋನಾ ರೂಲ್ಸ್ ನಾಳೆ ಗುರುವಾರ(ಜ.19ಕ್ಕೆ) ಮುಗಿಯುತ್ತಿದೆ. ಹಾಗಾದರೆ ನಾಡಿದ್ದಿನಿಂದ ಸರ್ಕಾರದ ನಿರ್ಧಾರವೇನು, ನಡೆಯೇನು ಎಂಬ ಬಗ್ಗೆ ರಾಜ್ಯದ ಜನತೆಯಲ್ಲಿ ಕುತೂಹಲವಿದೆ. ಸರ್ಕಾರದ ಮಟ್ಟದಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ತರಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ, ತಮಗೆ ಸರ್ಕಾರದ ನಿಯಮದಿಂದ ಬಹಳಷ್ಟು ಕಷ್ಟವಾಗುತ್ತಿದೆ, ನಮಗೂ ವ್ಯಾಪಾರ-ವಹಿವಾಟುಗಳಿಗೆ ಮುಕ್ತ ವಾತಾವರಣ ಕಲ್ಪಿಸಿಕೊಡಿ ಎಂದು ಹೋಟೆಲ್ ಮಾಲೀಕರ ಸಂಘ, ಬೇಕರಿ ಮತ್ತು ಕಾಂಡಿಮೆಂಟ್ಸ್ ಅಸೋಸಿಯೇಷನ್, ಬಾರ್, ಪಬ್ & ರೆಸ್ಟೋರೆಂಟ್ ಸಂಘ, ಕರ್ನಾಟಕ ಮ್ಯಾರೇಜ್ ಹಾಲ್ ವೆಲ್‌ಫೇರ್ ಅಸೋಸಿಯೇಷನ್, ಜಿಮ್, ಸ್ವಿಮ್ಮಿಂಗ್ ಪೂಲ್ ಮಾಲೀಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಸರ್ಕಾರದ ಮೇಲೆ ಒತ್ತಡ ತರಲು ಹಲವು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಸಾಲು-ಸಾಲು ಸಭೆಗಳನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಜನವರಿ 25ರ ವೇಳೆಗೆ ಕೊರೋನಾ ಪೀಕ್ ಗೆ ಹೋಗುವ ನಿರೀಕ್ಷೆ ಇದೆ: ಸಚಿವ ಆರ್ ಅಶೋಕ್
ಇದಕ್ಕೆಲ್ಲಾ ಇದೀಗ ಸರ್ಕಾರ ಹೊಸ ತಂತ್ರ ಹೆಣೆಯಲು ಮುಂದಾಗಿದೆ. ನಿನ್ನೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಆದರೆ ಅದರಲ್ಲಿ ನಡೆದ ಚರ್ಚೆಗಳು, ಸರ್ಕಾರದ ಮುಂದಿನ ನಿರ್ಧಾರ, ನಡೆಯ ಬಗ್ಗೆ ಕುತೂಹಲವನ್ನು ಹಾಗೆಯೇ ಇರಿಸಿಕೊಳ್ಳಲಾಗಿದ್ದು ಶುಕ್ರವಾರಕ್ಕೆ ಮುಂದಿನ ಸಭೆಯನ್ನು ಮುಂದೂಡಲಾಗಿದೆ.
ಶುಕ್ರವಾರ ವೀಕೆಂಡ್ ಕರ್ಫ್ಯೂ ನಿರ್ಧಾರ: ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ, ಜನವರಿ 25ರ ಹೊತ್ತಿಗೆ ಕೊರೋನಾ ಗರಿಷ್ಠ ಮಟ್ಟಕ್ಕೆ ಏರಬಹುದು ಎಂದು ಹೇಳಲಾಗುತ್ತಿದೆ. ಸರ್ಕಾರ ಮುಂದೆ ಮಾಡಬೇಕಾದ ಕ್ರಮಗಳ ಕುರಿತು ಶುಕ್ರವಾರ ಮತ್ತೆ ಸಭೆ ಸೇರಿ ನಿರ್ಧಾರ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದರು.
ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿದೆ. ಈಗಿನ ಪರಿಸ್ಥಿತಿ ನೋಡಿದರೆ ವೀಕೆಂಡ್ ಕರ್ಫ್ಯೂ ಬೆಂಗಳೂರಿನಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ಆದರೆ ತಮ್ಮ ಉದ್ಯಮ, ವ್ಯಾಪಾರ-ವಹಿವಾಟಿಗೆ ಕಷ್ಟವಾಗುತ್ತಿದೆ ಎಂದು ವೀಕೆಂಡ್ ಕರ್ಫ್ಯೂ ವಿರೋಧಿಸಿ ವಿವಿಧ ಉದ್ಯಮಗಳ ಸಂಘಟನೆಗಳು ನಾಳೆ ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಸಾಲು-ಸಾಲು ಸಭೆ ನಡೆಸಲಿದ್ದಾರೆ.
Read more
[wpas_products keywords=”deal of the day”]