The New Indian Express
ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಕೆ.ಜಿ.ಹಳ್ಳಿ ವಾರ್ಡ್ ಅಧ್ಯಕ್ಷ ಇಮ್ರಾನ್ ಅಹ್ಮದ್ ಅಲಿಯಾಸ್ ಇಮ್ರಾನ್ ಖಾನ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ: ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಕಿಂಗ್ ಪಿನ್ ಬಂಧನ
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ದೋಷಾರೋಪ ಪಟ್ಟಿ ಅನುಸಾರ ಅರ್ಜಿದಾರರಾದ ಇಮ್ರಾನ್ ಅಹ್ಮದ್ ಅವರು ಗಲಭೆ ನಡೆಯುವ ಮೊದಲು ಸಭೆಯಲ್ಲಿ ಭಾಗಿಯಾಗಿದ್ದರು ಎಂಬುದು ಸ್ಪಷ್ಟವಾಗಿದೆ. ಅಲ್ಲದೆ, ಅರ್ಜಿದಾರರು ಎಸ್‍ಡಿಪಿಐ ಅಧ್ಯಕ್ಷರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಥವಾ ಬೆದರಿಕೆ ಹಾಕುವ ಮೂಲಕ ವಿಚಾರಣೆಗೆ ಅಡ್ಡಿಪಡಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅರ್ಜಿದಾರರ ವಿರುದ್ಧದ ಆರೋಪವು ಪ್ರಾಥಮಿಕವಾಗಿ ಸಾಬೀತಾಗಿದೆ. ನಂಬಲು ಕೂಡ ಸೂಕ್ತ ಆಧಾರಗಳಿವೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯ ಹೊರಗಡೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚುವಾಗ ಅವರು ಭಾಗವಹಿಸಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಇರುವ ಅಂಶಗಳು ಸೂಚಿಸುತ್ತವೆ. ಹೀಗಾಗಿ, ಇಮ್ರಾನ್ ಅಹ್ಮದ್ ಜಾಮೀನಿನ ಮೇಲೆ ಬಿಡುಗಡೆಯಾಗುವ ಅರ್ಹತೆಯನ್ನು ಹೊಂದಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದ್ದು, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
Read more
[wpas_products keywords=”deal of the day”]