ಹೈಲೈಟ್ಸ್:
- ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಪಟ್ಟು
- ಕೋವಿಡ್ ನಿಯಮ ಉಲ್ಲಂಘಿಸಿದ ಕೈ ಪಡೆ ಆಕ್ರೋಶ
- ಕೆಲ ಅಧಿಕಾರಿಗಳ ವಿರುದ್ಧ ಕ್ರಮಕ್ಕೂ ಕಾಂಗ್ರೆಸ್ ಆಗ್ರಹ
ಈ ನಾಯಕರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ರಾಜ್ಯ ಕಾಂಗ್ರೆಸ್ ನಿಯೋಗವು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಬಿ.ಎಲ್.ಶಂಕರ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮುಖಂಡರಾದ ವಿಜಯ್ ಮುಳಗುಂದ ಅವರನ್ನೊಳಗೊಂಡ ನಿಯೋಗವು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿತು.
”ಪೂರ್ವನಿಗದಿಯಂತೆ ಜ.9ರಂದು ಕಾಂಗ್ರೆಸ್ ‘ನಮ್ಮ ನೀರು ನಮ್ಮ ಹಕ್ಕು’ ಹೆಸರಿನಡಿ ಮೇಕೆದಾಟು ಪಾದಯಾ ತ್ರೆಯನ್ನು ಸಂಗಮದಿಂದ ಆರಂಭಿಸಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಪಾಲಿಸಿದ್ದರೂ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ನಾಯಕರ ವಿರುದ್ಧ ಪೊಲೀಸರು ಹಲವು ಎಫ್‌ಐಆರ್ ದಾಖಲಿಸಿದ್ದಾರೆ. ಆ ಮೂಲಕ ಕೋವಿಡ್ ಹರಡಲು ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ನೆಲದ ಕಾನೂನಿಗೆ ಕಾಂಗ್ರೆಸ್ ತಲೆಬಾಗಿದೆ,” ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾದ ಎಂಪಿ ರೇಣುಕಾಚಾರ್ಯ ವಿರುದ್ಧ ಆರಗ ಜ್ಞಾನೇಂದ್ರ ಆಕ್ಷೇಪ
”ಬಿಜೆಪಿ ನಾಯಕರು, ಶಾಸಕರು, ಕಾರ್ಯಕರ್ತರು ಸರಕಾರ ರೂಪಿಸಿರುವ ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಅನುಮತಿ ಪಡೆಯದೆ ವೈಯಕ್ತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ. ಇಷ್ಟಾದರೂ ಸಂಬಂಧಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ಮೌನವಾಗಿದ್ದಾರೆ,” ಎಂದು ಕಾಂಗ್ರೆಸ್ ದೂರಿದೆ.
”ನಿಯಮಗಳನ್ನು ಗಾಳಿಗೆ ತೂರಿ ಕೋವಿಡ್ ಹರಡಲು ಕಾರಣರಾದ ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘನೆಯಾದರೂ ಬಿಜೆಪಿ ಮುಖಂಡರ ವಿರುದ್ಧ ಕ್ರಮ ಜರುಗಿಸದೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕೂಡಲೇ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು,” ಎಂದು ನಿಯೋಗ ಆಗ್ರಹಿಸಿದೆ.
Read more
[wpas_products keywords=”deal of the day sale today offer all”]