Karnataka news paper

IND vs SA 1st ODI: ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ!


ಪಾರ್ಲ್‌ (ದಕ್ಷಿಣ ಆಫ್ರಿಕಾ): ಇಲ್ಲಿನ ಬೊಲೆಂಡ್‌ ಪಾರ್ಕ್‌ನಲ್ಲಿ ಶುರುವಾದ ಮೊದಲನೇ ಓಡಿಐ ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ನಾಯಕನಾಗಿ ಟಾಸ್‌ಗೆ ಬಂದ ಕೆ.ಎಲ್‌ ರಾಹುಲ್‌ ಟಾಸ್‌ ಸೋತು ನಿರಾಶೆ ಅನುಭವಿಸಿದರು.

ಇದಕ್ಕೂ ಮುನ್ನ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 2-1 ಅಂತರದಲ್ಲಿ ಗೆಲುವು ಪಡೆದಿತ್ತು. ಇದೀಗ ಅದೇ ವಿಶ್ವಾಸದಲ್ಲಿ ಏಕದಿನ ಸರಣಿಯಲ್ಲಿ ಹರಿಣ ಪಡೆ ಕಣಕ್ಕೆ ಇಳಿದಿದೆ. ಮತ್ತೊಂದೆಡೆ ಕೆ.ಎಲ್‌ ರಾಹುಲ್‌ ನಾಯಕತ್ವದ ಭಾರತ ತಂಡ, ಓಡಿಐ ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿ ಆಗಮಿಸಿದೆ.

ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ವೆಂಕಟೇಶ್‌ ಅಯ್ಯರ್‌ಗೆ ಚೊಚ್ಚಲ ಅವಕಾಶ ಕಲ್ಪಿಸಲಾಗಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಮತ್ತೊಂದೆಡೆ ಹಿರಿಯ ವೇಗಿ ಮೊಹಮ್ಮದ್‌ ಶಮಿ ಅವರ ಬದಲು ಭುವನೇಶ್ವರ್‌ ಕುಮಾರ್‌ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ Vs ಭಾರತ ಮೊದಲನೇ ಓಡಿಐ ಸ್ಕೋರ್‌ಕಾರ್ಡ್
ಉಭಯ ತಂಡಗಳ ಪ್ಲೇಯಿಂಗ್‌ ಇಲೆವೆನ್‌

ಭಾರತ: ಕೆಎಲ್ ರಾಹುಲ್(ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ವಿ.ಕೀ), ವೆಂಕಟೇಶ್ ಅಯ್ಯರ್, ಶಾರ್ದುಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್‌ಪ್ರಿತ್‌ ಬುಮ್ರಾ, ಯುಜ್ವೇಂದ್ರ ಚಹಲ್

ದಕ್ಷಿಣ ಆಫ್ರಿಕಾ:
ಕ್ವಿಂಟನ್ ಡಿ ಕಾಕ್(ವಿ.ಕೀ), ಜಾನ್ನೆಮನ್ ಮಲನ್, ಏಡೆನ್ ಮಾರ್ಕ್ರಮ್, ರಾಸಿ ವ್ಯಾನ್ ಡೆರ್ ಡುಸ್ಸೆನ್, ತೆಂಬಾ ಬವುಮಾ(ನಾಯಕ), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಮಾರ್ಕೊ ಯೆನ್ಸನ್, ಕೇಶವ್ ಮಹಾರಾಜ್, ತಬ್ರೈಜ್ ಶಾಮ್ಸಿ, ಲುಂಗಿ ಎನ್ಗಿಡಿ



Read more

[wpas_products keywords=”deal of the day sale today offer all”]