Karnataka news paper

ಕೋವಿಡ್-19: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಫೆಬ್ರವರಿ 28ರ ವರೆಗೆ ವಿಸ್ತರಣೆ


PTI

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. 

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಬುಧವಾರ ಅಧಿಸೂಚನೆ ಹೊರಡಿಸಿದೆ.

ಇದನ್ನು ಓದಿ: 20 ಗಂಟೆಗಳ ವಿಳಂಬದ ನಂತರ ಬೆಂಗಳೂರು-ಸ್ಯಾನ್ ಫ್ರಾನ್ಸಿಸ್ಕೋ ಏರ್ ಇಂಡಿಯಾ ವಿಮಾನ ಟೇಕ್ ಆಫ್!

ಅದಾಗ್ಯೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ನಿಗದಿತ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಡಿಜಿಸಿಎ ಕಳೆದ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಆದರೆ ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ನಂತರ ತನ್ನ ನಿರ್ಧಾರ ಬದಲಿಸಿದ್ದು, ಫೆಬ್ರವರಿ 28ರ ವರೆಗೆ ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧವನ್ನು ಮುಂದುವರೆಸಿದೆ.

ಕಳೆದ ವರ್ಷ ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನವನ್ನು ಅನುಮತಿಸಲಾಗಿದೆ.

ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.



Read more

[wpas_products keywords=”deal of the day”]