ಬೆಂಗಳೂರು: ಐಟಿ ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಮ್ಮಿಕೊಂಡ ರಾಷ್ಟ್ರೀಯ ನವೋದ್ಯಮ ದಿನ ಕಾರ್ಯಕ್ರಮದಲ್ಲಿ ಆಂಗ್ಲ ಭಾಷೆ ಬಳಸಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
‘ಇದೇ 16ರಂದು ನಡೆದ ರಾಷ್ಟ್ರೀಯ ನವೋದ್ಯಮ ದಿನದ ಕಾರ್ಯಕ್ರಮದ ವೇದಿಕೆ ಮೇಲೆ ಅಳವಡಿಸಲಾದ ಫಲಕ ಸಂಪೂರ್ಣ ಆಂಗ್ಲ ಭಾಷೆಯಲ್ಲಿದೆ. ಇದು ಸರ್ಕಾರಿ ಆದೇಶದ ಸ್ಪಷ್ಟ ಉಲ್ಲಂಘನೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜಾರಿಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.
Read more from source
[wpas_products keywords=”deal of the day sale today kitchen”]