ನನಗೆ ರಾಜ್ಯದ ಜನರ ಆರೋಗ್ಯ ತುಂಬಾ ಮುಖ್ಯ. ವಿಕೇಂಡ್ ಲಾಕ್ಡೌನ್ ಬಗ್ಗೆ ಶುಕ್ರವಾರ ಸಭೆ ನಂತರ ಮಾತನಾಡುತ್ತೇನೆ. ಏರ್ಪೋರ್ಟ್ನಲ್ಲಿ ಕೋವಿಡ್ ಟೆಸ್ಟ್ ಗೋಲ್ಮಾಲ್ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಇದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪು ವರದಿ ನೀಡಿದರೆ ಲೈಸೆನ್ಸ್ ರದ್ದು ಮಾಡಿ ಕಾನೂನು ಕ್ರಮ ವಹಿಸುತ್ತೇವೆ ಎಂದು ಹೇಳಿದರು.
ಕೋವಿಡ್ ನಿಯಮಾವಳಿ ಉಲ್ಲಂಘನೆಯಾಗಿದ್ದು ಬಿಜೆಪಿ ಶಾಸಕರ ಮೇಲಿಯೂ ಪ್ರಕರಣ ದಾಖಲು ಮಾಡಬೇಕೆಂದು ಸಿಎಂ ಮನೆ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸುವ ವಿಚಾರ ಸಂಬಂಧ ಸಚಿವ ಸುಧಾಕರ್ ಮಾತನಾಡಿ, ಕಾಂಗ್ರೆಸ್ನವರು ಪರವಾನಗಿ ಪಡೆದು ಪ್ರತಿಭಟನೆ ಮಾಡಲಿ. ಯಾರ ಮನೆ ಬಳಿ, ಯಾವ ರೀತಿ ಬೇಕಾದರೂ ಪ್ರತಿಭಟಿಸಲು ಅವಕಾಶ ಇದೆ. ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ಎಂಬುದು ಅವರು ಮೊದಲು ತಿಳಿಸಲಿ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರು ತಪ್ಪು ಮಾಡಿದರೂ ತಪ್ಪೇ. ನಿಯಮಗಳನ್ನು ಯಾರೂ ಸಹ ಮೀರಿ ನಡೆಯಬಾರದು. ವಿಪಕ್ಷ ನಾಯಕರು ಹತಾಶೆಯಿಂದ ಮಾತಾಡುತ್ತಿದ್ದಾರೆ, ನಾನು ಪ್ರತಿಕ್ರಿಯಿಸಲ್ಲ ಎಂದು ಹೊರಟರು.
Read more
[wpas_products keywords=”deal of the day sale today offer all”]