ಹೈಲೈಟ್ಸ್:
- ಎಮ್ಮೆ ಓಡಿಸುವ ಕಾರ್ಯಕ್ರಮ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ
- ಬೆಳಗಾವಿ ಉತ್ತರ ಶಾಸಕ ಶಾಸಕ ಅನಿಲ್ ಬೆನಕೆ ಸೇರಿ 27 ಜನರ ವಿರುದ್ಧ ಕೇಸ್
- ಅನಿಲ್ ಬೆನಕೆ ವಿರುದ್ಧ ಬೆಳಗಾವಿ ಪೋಲಿಸರು ಪ್ರಕರಣ ದಾಖಲು
ಕೋವಿಡ್ ನಿಯಮ ಜಾರಿಯಲ್ಲಿದ್ದರೂ ಶಾಸಕ ಅನಿಲ್ ಬೆನಕೆ ಎಮ್ಮೆ ಓಡಿಸುವ ಸ್ಪರ್ಧೆ ಉದ್ಘಾಟಿಸಿದ್ದರು, ಅಲ್ಲದೆ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಜನರು ಗುಂಪು ಸೇರುವಂತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.
ವಿಡಿಯೋ ನೋಡಿ ಕೇಸ್ ದಾಖಲು!
ಈ ಮೊದಲು ಕಾರ್ಯಕ್ರಮಗಳ ಆಯೋಜಕರ ವಿರುದ್ಧ ಮಾತ್ರ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ವಿಡಿಯೋ ದಾಖಲೆಗಳನ್ನು ಪರಿಶೀಲಿಸಿ ಶಾಸಕರೂ ಸೇರಿದಂತೆ ಇತರ ೨೭ ಜನರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಬೆನಕೆ ಕೋವಿಡ್ ನಿಯಮ ಉಲ್ಲಂಘಿಸಿದ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ನಿಯೋಗ ಸರಕಾರದ ಮುಖ್ಯಕಾರ್ಯದರ್ಶಿಗೆ ದೂರು ಸಲ್ಲಿಸಿತ್ತು.
ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಪಟ್ಟು !
ಎಮ್ಮೆ ಓಟ!
ಬೆಳಗಾವಿ ನಗರದ ಚವಾಟ ಗಲ್ಲಿಯಲ್ಲಿ ಮಕರ ಸಂಕ್ರಮಣದ ನಿಮಿತ್ತ ಚವಾಟ ಯುವಕ ಸಂಘಟನೆ, ಪಂಚ ಸಮಿತಿ ಹಾಗೂ ಗವಳಿ ಸಮಾಜದ ವತಿಯಿಂದ ಆಯೋಜಿಸಿದ್ದ ಎಮ್ಮೆಗಳನ್ನು ಓಡಿಸುವ ಸ್ಪರ್ಧೆಗೆ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು.ಅದರ ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಸಲ್ಲಿಸಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
Read more
[wpas_products keywords=”deal of the day sale today offer all”]