ಐಕ್ಯೂ (iQoo) ಮೊಬೈಲ್ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಐಕ್ಯೂ ಸಂಸ್ಥೆಯ ಕೆಲವು ಸ್ಮಾರ್ಟ್‌ಫೋನ್‌ಗಳ ಈಗಾಗಲೇ ಗ್ರಾಹಕರ ಗಮನ ಸೆಳೆದಿವೆ. ಕಂಪನಿಯು ಇತ್ತೀಚಿಗಷ್ಟೆ ಚೀನಾ ಮಾರುಕಟ್ಟೆಯಲ್ಲಿ ಐಕ್ಯೂ 9 ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯು ಐಕ್ಯೂ 9 ಮತ್ತು ಐಕ್ಯೂ 9 ಪ್ರೊ ಫೋನ್‌ಗಳನ್ನು ಒಳಗೊಂಡಿದೆ. ಇದೀಗ ಐಕ್ಯೂ ಕಂಪೆನಿ ತನ್ನ ಹೊಸ ಐಕ್ಯೂ 9 ಪ್ರೊ ಫೋನ್ ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.

ಹೌದು, ವಿವೋ ಕಂಪನಿಯ ಸಬ್ ಬ್ರಾಂಡ್ ಆಗಿರುವ ಐಕ್ಯೂ (iQoo) ಸಂಸ್ಥೆ ಸದ್ಯದಲ್ಲೇ ಐಕ್ಯೂ 9 ಪ್ರೊ ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದು ಎನ್ನುವ ಸುಳಿವು ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಪವರ್ ಒಳಗೊಂಡಿದೆ. ಹಾಗೆಯೇ 12GB RAM ಸಾಮರ್ಥ್ಯದ ವೇರಿಯಂಟ್ ಆಯ್ಕೆಯನ್ನು ಹೊಂದಿರಲಿದೆ. ಜೊತೆಗೆ ಫಣ್‌ಟಚ್ ಓಎಸ್ 12 ಸ್ಕಿನ್ ಬೆಂಬಲ ಪಡೆದಿರಲಿದೆ. ಇನ್ನು ಈ ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ 3,200 x 1,440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಕ್ವಾಡ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಹಾಗೆಯೇ ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.
ವೇಗದ ಪ್ರೊಸೆಸರ್‌ಗೆ ಪೂರಕವಾಗಿ ಈ ಫೋನ್ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಿದೆ.

ಐಕ್ಯೂ 9 ಸ್ಮಾರ್ಟ್‌ಫೋನ್ ಫೀಚರ್ಸ್
ಐಕ್ಯೂ 9 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರವನ್ನು ಹೊಂದಿದ್ದು, ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
Best Mobiles in India
English summary
iQOO 9 Pro Indian model arrives on Geekbench running on Android 12 OS.
Story first published: Thursday, January 20, 2022, 15:31 [IST]
Read more…
[wpas_products keywords=”smartphones under 15000 6gb ram”]