ಬೆಂಗಳೂರು: ‘ಸಮಾಜ ವಿರೋಧಿ ಶಕ್ತಿಗಳ ಜೊತೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು‘ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ಚಾಮರಾಜಪೇಟೆ ವ್ಯಾಪ್ತಿಯಲ್ಲಿ ₹ 7.40 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಸಂಚಾರ ಪೊಲೀಸ್ ಠಾಣೆಯ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
‘ಮುಖ್ಯಮಂತ್ರಿ ನಿವಾಸದ ಬಳಿ ಭದ್ರತೆಗೆ ನಿಯೋಜಿತರಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇಂಥ ಹೀನ ಕೃತ್ಯಗಳನ್ನು ಸಹಿಸುವುದಿಲ್ಲ. ಇಂಥ ಕೆಲವೇ ಸಿಬ್ಬಂದಿಯಿಂದ ಇಲಾಖೆಯಲ್ಲಿರುವ ಒಂದು ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ’ ಎಂದರು.
‘ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ನೇಮಿಸಿದ ಸಿಬ್ಬಂದಿ ಗಾಂಜಾ ಮಾರಾಟದವರ ಜೊತೆ ಶಾಮೀಲಾಗುವುದು ಅಕ್ಷಮ್ಯ ಅಪರಾಧ’ ಎಂದು ಅಭಿಪ್ರಾಯಪಟ್ಟ ಅವರು, ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲದು, ಅಂಥವರು, ಇಲಾಖೆಯಲ್ಲಿಯೇ ಇರಬಾರದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.
ಕೆಲವು ಯುವ ಕಾಂಗ್ರೆಸ್ ನಾಯಕರು ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ‘ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ದಾಖಲಾದರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದಾರೆ’ ಎಂದರು.
ಲೋಕಸಭಾ ಸದಸ್ಯ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ರಮೇಶ್ ಗೌಡ ಮತ್ತು ಲೆಹರ್ ಸಿಂಗ್ ಇದ್ದರು.
ಇವುಗಳನ್ನೂ ಓದಿ…
ಸಿಎಂ ಸಿಬ್ಬಂದಿಯೇ ಡ್ರಗ್ಸ್ ಪೆಡ್ಲರ್? ಮಾಫಿಯಾ ಸದೆಬಡಿಯುವವರು ಯಾರು?: ಸುರ್ಜೆವಾಲ
ಡ್ರಗ್ಸ್ ಸಾಗಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಭದ್ರತಾ ಸಿಬ್ಬಂದಿ ಬಂಧನ
Read more from source
[wpas_products keywords=”deal of the day sale today kitchen”]