ಪೇದೆಗಳ ಡ್ರಗ್ಸ್ ಕೇಸ್ : ತನಿಖಾಧಿಕಾರಿಗಳ ಅಮಾನತು, ಡಿಸಿಪಿಗಳಿಗೆ ನೋಟಿಸ್
ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಿಲ್ಲಎಂಬುದು ಕಂಡು ಬಂದ ಹಿನ್ನೆಲೆಯಲ್ಲಿ ಆರ್.ಟಿ.ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಅಮಾನತಿಗೆ ಪೊಲೀಸ್ ಕಮಿಷನರ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಪ್ರಕರಣ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ ವರದಿ ನೀಡುವಂತೆ ಸಿಸಿಬಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಕೊರೊನಾ ನಿಯಮ ಉಲ್ಲಂಘನೆ, ಎನ್.ಆರ್.ರಮೇಶ್ ವಿರುದ್ಧ ಎಫ್‌ಐಆರ್
ಕೋವಿಡ್ ನಿಯಮ ಉಲ್ಲಂಘಿಘಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದ ಆರೋಪದಡಿ ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷ ಎನ್.ಆರ್.ರಮೇಶ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಡಿಸಿಪಿ ಸಂಜೀವ್ ಪಾಟೀಲ್‌ಗೆ ದೂರು ನೀಡಿದ್ದರು. ಅವರು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಬೆಂಗಳೂರಿನ ಸ್ಟಾರ್ ರಾಹುಲ್ ಜಾಮೀನಿಗೆ ಹಣ ಹೊಂದಿಸಲು ಗಾಂಜಾ ಮಾರಾಟ : ನಾಲ್ವರ ಬಂಧನ
ಜ.14ರಂದು ರಾಯಪುರ ವಾರ್ಡ್‌ನ ಬಿಬಿಎಂಪಿ ಕಟ್ಟಡದಲ್ಲಿ ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಎನ್.ಆರ್. ರಮೇಶ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಕೊರೊನಾ ನಿಯಮಾವಳಿ ಉಲ್ಲಂಘಿಸಲಾಗಿದೆ. ಈ ಮೂಲಕ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಲು ಕಾರಣರಾಗಿದ್ದಾರೆ. ಹೀಗಾಗಿ ಎನ್.ಆರ್.ರಮೇಶ್ ಸೇರಿದಂತೆ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿಕೋರಲಾಗಿದೆ.
Read more
[wpas_products keywords=”deal of the day sale today offer all”]