Karnataka news paper

ಯಾರು ಈ ಅಪರ್ಣಾ ಯಾದವ್, ಸಮಾಜವಾದಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಸೊಸೆ ಕುರಿತ ಆಸಕ್ತಿಕರ ಮಾಹಿತಿ


Online Desk

ಅಪರ್ಣಾ ಯಾದವ್ (Aparna Yadav), ಸಮಾಜವಾದಿ ಪಕ್ಷದ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ಸೊಸೆ, ಮಗನ ಪತ್ನಿ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರಿ ಸುದ್ದಿಯಾಗಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಕದನ ಕುತೂಹಲ ಕೆರಳಿಸಿದೆ. 

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುಂಪಿನ ಕೇಸರಿ ಪಡೆಗೆ ಸೇರಿ ಅಪರ್ಣಾ ಯಾದವ್, ದೇಶಸೇವೆಯನ್ನು ಮಾಡಲು ಬಿಜೆಪಿಗೆ ಸೇರಿದ್ದೇನೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕೆಲಸ, ಯೋಜನೆಗಳಿಂದ ಅತ್ಯಂತ ಪ್ರಭಾವಿತಳಾಗಿದ್ದೇನೆ ಎಂದು ಹೇಳಿದ್ದಾರೆ.

ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಯುಪಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Aditya Nath) ಅವರ ನೀತಿಗಳಿಂದ ಗಾಢವಾಗಿ ಪ್ರಭಾವಿತನಾಗಿರುತ್ತೇನೆ, ಅವರ ನೀತಿಗಳು ಏನೇ ಇರಲಿ, ನಾನು ಅದಕ್ಕೆ ಬದ್ಧಳಾಗಿರುತ್ತೇನೆ, ನಾನು ಈ ಪಕ್ಷಕ್ಕೆ ಸೇರಿದ್ದು ಇದರಿಂದ ರಾಷ್ಟ್ರಕ್ಕೆ ಉತ್ತಮ ಸೇವೆ ಸಲ್ಲಿಸಬಹುದು ಎಂಬ ನಂಬಿಕೆಯಿದೆ ಎಂಬ ಮಾತುಗಳನ್ನು ಆಡಿದ್ದಾರೆ.

ಯಾರು ಈ ಅಪರ್ಣಾ ಯಾದವ್?
ಮುಲಾಯಂ ಸಿಂಗ್ ಯಾದವ್ ಅವರ ಮಗ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಮಲ ಸಹೋದರ ಪ್ರತೀಕ್ ಯಾದವ್ ಅವರ ಪತ್ನಿಯೇ ಅಪರ್ಣಾ ಯಾದವ್. ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿಯ ಮಗ ಪ್ರತೀಕ್ ಯಾದವ್. ಅಖಿಲೇಶ್ ಯಾದವ್ ಮೊದಲ ಪತ್ನಿ ಮಗ.2011ರಲ್ಲಿ ಇವರ ವಿವಾಹ ಏರ್ಪಟ್ಟಿತ್ತು. 

ಇದನ್ನೂ ಓದಿ: ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವುದನ್ನು ತಡೆಯಲು ಮುಲಾಯಂ ಸಿಂಗ್ ಯತ್ನಿಸಿದ್ದರು: ಅಖಿಲೇಶ್ ಯಾದವ್

ಅಪರ್ಣಾ ಯಾದವ್ ತಂದೆ ಅರವಿಂದ್ ಸಿಂಗ್ ಬಿಶ್ಟ್ ಮಾಜಿ ಪತ್ರಕರ್ತ ಹಾಗೂ ಈಗ ಮಾಹಿತಿ ಆಯುಕ್ತ. ಇನ್ನು ಅವರ ತಾಯಿ ಲಕ್ನೊ ನಗರ ಪಾಲಿಕೆಯಲ್ಲಿ ಅಧಿಕಾರಿ. ಲಕ್ನೊದ ಲೊರೆಟೊ ಕಾನ್ವೆಂಟ್ ಶಾಲೆಯ ಹಳೆ ವಿದ್ಯಾರ್ಥಿನಿ ಈ ಅಪರ್ಣಾ ಯಾದವ್. ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ರಾಜಕೀಯದಲ್ಲಿ ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ಹಲವು ಬಾರಿ ಬಿಜೆಪಿ ಹೊಗಳಿದ್ದ ಅಪರ್ಣಾ ಯಾದವ್:

2014ರಿಂದ ಸಾರ್ವಜನಿಕವಾಗಿ ರಾಜಕಾರಣದಲ್ಲಿ ಕಾಣಿಸಿಕೊಳ್ಳಲಾರಂಭಿಸಿದ್ದ ಅಪರ್ಣಾ ಯಾದವ್ ನಂತರ ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದರು. ಈ ಹಿಂದೆ ಅಪರ್ಣಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸ್ವಚ್ಛ ಭಾರತ ಅಭಿಯಾನವನ್ನು ಹೊಗಳಿದ್ದರು, ಸಾಮಾಜಿಕ ಮಾಧ್ಯಮದಲ್ಲಿ ಮೋದಿ ಅವರೊಂದಿಗೆ ಸೆಲ್ಫಿ ಹಂಚಿಕೊಂಡಿದ್ದರು. ಗೋಹತ್ಯೆಯ ವಿರುದ್ಧ ಪೋಸ್ಟ್ ಹಾಕಿದ್ದರು. ಮುಲಾಯಂ ಸಿಂಗ್ ಯಾದವ್ ಅವರು ನಟ ಅಮೀರ್ ಖಾನ್ ಗೆ ಬೆಂಬಲ ವ್ಯಕ್ತಪಡಿಸಿದ ಸಮಯದಲ್ಲಿ ಅಸಹಿಷ್ಣುತೆಯ ಕುರಿತು ಅವರ ಅಮೀರ್ ಖಾನ್ ನೀಡಿದ್ದ ಹೇಳಿಕೆಯನ್ನು ವಿರೋಧಿಸಿದ್ದರು. ನವೆಂಬರ್ 2014 ರಲ್ಲಿ, ಅವರು ಮತ್ತು ಅವರ ಪತಿ ಪ್ರತೀಕ್ ಯಾದವ್ ರಾಂಪುರದಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಅದ್ದೂರಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಬದಲಿಗೆ ದುಬೈಗೆ ಹೋಗಿದ್ದರು. 

ಕೇಂದ್ರ ಬಿಜೆಪಿ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ 370 ನೇ ವಿಧಿಯ ರದ್ದತಿಯನ್ನು ಬೆಂಬಲಿಸುವುದರಿಂದ ಹಿಡಿದು ಸಮಾಜವಾದಿ ಪಕ್ಷವು ವಿರೋಧಿಸಿದ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಬೆಂಬಲಿಸುವವರೆಗೆ ಕಳೆದ ನಾಲ್ಕೈದು ವರ್ಷಗಳಿಂದ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದರು.

ಅಪರ್ಣಾ ಯಾದವ್, ರಾಜಕಾರಣಿ ಮತ್ತು ಗಾಯಕಿ
2017 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಪರ್ಣಾ ಯಾದವ್ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದರು. ಅವರು ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಿಂದ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಅವರು ಬಿಜೆಪಿ ಅಭ್ಯರ್ಥಿ ರೀಟಾ ಬಹುಗುಣ ಜೋಶಿ ವಿರುದ್ಧ 33,796 ಮತಗಳ ಅಂತರದಿಂದ ಆಗ ಸೋತಿದ್ದರು. ರಾಜಕಾರಣಿಯಾಗಿರುವುದರ ಹೊರತಾಗಿ, ಅಪರ್ಣಾ ಯಾದವ್ ತರಬೇತಿ ಪಡೆದ ಶಾಸ್ತ್ರೀಯ ಗಾಯಕಿ. ಅವರು ಲಕ್ನೋದ ಭಾತಖಂಡೆ ಸಂಗೀತ ವಿಶ್ವವಿದ್ಯಾಲಯದಲ್ಲಿ ಒಂಬತ್ತು ವರ್ಷಗಳ ಕಾಲ ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ಮಾಡಿದರು. ಸಾಮಾಜಿಕ ಮತ್ತು ಸಾರ್ವಜನಿಕ ಕೆಲಸಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಮಹಿಳಾ ಹಕ್ಕುಗಳು ಮತ್ತು ಸಬಲೀಕರಣಕ್ಕಾಗಿ ಕೆಲಸ ಮಾಡುವ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾಗಿದ್ದೇಕೆ?
ಅಪರ್ಣಾ ಯಾದವ್ ಅವರು ಈ ವರ್ಷದ ಉತ್ತರ ಪ್ರದೇಶ ಚುನಾವಣೆಯಲ್ಲಿ ಲಕ್ನೋ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಲವು ತೋರಿದ್ದರು. ಅಖಿಲೇಶ್ ಯಾದವ್ ಉತ್ತರ ಪ್ರದೇಶ ಚುನಾವಣೆಯಲ್ಲಿ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ಒಲವು ತೋರಲಿಲ್ಲ, ಇದು ಅಪರ್ಣಾ ಯಾದವ್ ಬಿಜೆಪಿ ಸೇರಲು ಇನ್ನಷ್ಟು ಕಾರಣವಾಯಿತು. 

ಇದನ್ನೂ ಓದಿ: ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆ

ಬಿಜೆಪಿ ಸೇರಿದ ನಂತರ ಅಪರ್ಣಾ ಯಾದವ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಕ್ಷೇತ್ರವನ್ನು ಬಿಜೆಪಿ ನಾಯಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ. 

ಉತ್ತರ ಪ್ರದೇಶ ಚುನಾವಣೆಗೆ ಸ್ವಲ್ಪ ಮುಂಚೆಯೇ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಕುಟುಂಬದ ಬೆಂಬಲದ ನೆಲೆಯನ್ನು ಬಲಪಡಿಸಲು ತನ್ನ ಚಿಕ್ಕಪ್ಪ ಶಿವಪಾಲ್ ಯಾದವ್ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. 

ಲಕ್ನೋ ಕಂಟೋನ್ಮೆಂಟ್ ಬಿಜೆಪಿಯ ಭದ್ರಕೋಟೆ: ಲಕ್ನೋ ಕಂಟೋನ್ಮೆಂಟ್ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದು ಹೇಳಲಾಗುತ್ತಿದೆ. 2017ರ ಚುನಾವಣೆಯಲ್ಲಿ ಬಿಜೆಪಿಯ ರೀಟಾ ಬಹುಗುಣ ಜೋಶಿ ಗೆಲುವು ಸಾಧಿಸಿದ್ದರು. ಇದಾದ ನಂತರ ಉಪಚುನಾವಣೆಯಲ್ಲಿ ಬಿಜೆಪಿಯ ಸುರೇಶ್ ತಿವಾರಿ ಶಾಸಕರಾದರು.

ಲಕ್ನೋ ಕಂಟೋನ್ಮೆಂಟ್ ಬ್ರಾಹ್ಮಣ ಪ್ರಾಬಲ್ಯದ ಪ್ರದೇಶವಾಗಿದೆ. ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 1 ಲಕ್ಷ ಬ್ರಾಹ್ಮಣ ಮತದಾರರಿದ್ದಾರೆ. ಸಿಂಧಿ-ಪಂಜಾಬಿ ಮತದಾರರು ಈ ಪ್ರದೇಶದಲ್ಲಿ ಎರಡನೇ ಪ್ರಬಲ ಸಮುದಾಯವಾಗಿದ್ದರೆ ಮುಸ್ಲಿಮರು ಸುಮಾರು 25,000 ಸಂಖ್ಯೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಯಾದವ ಸಮುದಾಯದ 20,000 ಹಾಗೂ ಠಾಕೂರ್ ಸಮುದಾಯದ 15,000 ಮತದಾರರಿದ್ದಾರೆ. 



Read more

[wpas_products keywords=”deal of the day”]