Karnataka news paper

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸಿಟಿವ್ ಬಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ಸಿಬ್ಬಂದಿ ವಿರುದ್ಧ ಆಕ್ರೋಶ!


The New Indian Express

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರು ತಮ್ಮ ವಿಮಾನ ಪ್ರಯಾಣಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದು, ನಂತರ ಕೋವಿಡ್ ಪಾಸಿಟಿವ್ ವರದಿ ಬಂದರೆ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಾಸಿಟಿವ್ ವರದಿ ಪಡೆದ ಪ್ರಯಾಣಿಕರು ವಿಮಾನ ನಿಲ್ದಾಣದ ಕೋವಿಡ್ ಪರೀಕ್ಷಾ ಕೇಂದ್ರದಲ್ಲಿ ಕೆಲಸ ಮಾಡುವವರನ್ನು ನಿಂದಿಸುತ್ತಿದ್ದಾರೆ ಮತ್ತು ಅವರ ವಿರುದ್ಧ ತೀವ್ರವಾಗಿ ಪ್ರತಿಭಟಿಸುತ್ತಾರೆ. ಅವರನ್ನು ನಿಯಂತ್ರಿಸಲು ಕೆಲವೊಮ್ಮೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ(ಸಿಐಎಸ್‌ಎಫ್) ಕರೆ ಮಾಡಬೇಕಾಗುತ್ತದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಇದನ್ನು ಓದಿ: ಜನರಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರ ಹೊಂದಿಲ್ಲ, ಹೋಂ ಐಸೊಲೇಷನ್ ನಲ್ಲಿರುವವರಿಗೆ ಕಿಟ್ ವಿತರಣೆ: ಸಚಿವ ಡಾ ಕೆ ಸುಧಾಕರ್

ಇಲ್ಲಿ ಸ್ಥಾಪಿಸಲಾದ ಸೌಲಭ್ಯಗಳಲ್ಲಿ ಸರಾಸರಿ 400 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ರಾಪಿಡ್ RT-PCR ಪರೀಕ್ಷೆ ಮಾಡಿಸಬಹುದು ಮತ್ತು ಒಂದು ಗಂಟೆಯೊಳಗೆ ಅವರ ಪರೀಕ್ಷಾ ವರದಿ ಬರುತ್ತದೆ.

ವಿದೇಶಕ್ಕೆ ತೆರಳಲು ಮನೆಯಿಂದ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ತಮ್ಮ ಕೋವಿಡ್ ಪರೀಕ್ಷೆಯ ವರದಿ ಪಾಸಿಟಿವ್ ಬಂದಾಗ ಹತಾಶೆಗೊಂಡು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

“ವಿಮಾನ ನಿಲ್ದಾಣದ ಒಳಗೆ ಸ್ಥಾಪಿಸಲಾದ COVID ಪರೀಕ್ಷಾ ಪ್ರಯೋಗಾಲಯಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಮೇಲೆ ಅಂತಹ ಪ್ರಯಾಣಿಕರು ಕೂಗಾಡುವುದನ್ನು ನಾನು ನೋಡಿದ್ದೇನೆ. ವಿಶೇಷವಾಗಿ ಮಧ್ಯಪ್ರಾಚ್ಯ ದೇಶಗಳಿಗೆ ಹೋಗುವ ಪ್ರಯಾಣಿಕರಲ್ಲಿ ಇದು ಸಾಮಾನ್ಯವಾಗಿದೆ. ಅಲ್ಲಿ ನೆಗಟಿವ್ ಕೋವಿಡ್ ಪರೀಕ್ಷಾ ವರದಿ ಕಡ್ಡಾಯವಾಗಿದೆ ಮತ್ತು ವಿಮಾನ ಹತ್ತುವ ಮೊದಲು ಕೇವಲ ಆರು ಗಂಟೆಗಳ ಮೊದಲು ಪರೀಕ್ಷೆ ಮಾಡಿಸಿರಬೇಕು ಎಂಬ ನಿಯಮ ಇದೆ” ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಇತರೆ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾವು ಕೋವಿಡ್ ಪರೀಕ್ಷೆ ಮಾಡಿಸಿದ್ದು, ಅಲ್ಲಿ ನೆಗಟಿವ್ ವರದಿ ಬಂದಿದೆ. ಆದರೆ ಇಲ್ಲಿ ಮಾತ್ರ ಪಾಸಿಟಿವ್ ಬರುತ್ತಿದೆ ಎಂದು ಹಲವು ಅಂತರಾಷ್ಟ್ರೀಯ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.



Read more

[wpas_products keywords=”deal of the day”]