ಮುಂಬೈ: ಬಾಲಿವುಡ್ ನಟಿಯರಾದ ಕರೀನಾ ಕಪೂರ್ ಖಾನ್ ಮತ್ತು ಅಮೃತಾ ಅರೋರಾ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ ಎಂದು ಬೃಹನ್ ಮುಂಬೈ ನಗರಪಾಲಿಕೆ ಮೂಲಗಳು ತಿಳಿಸಿವೆ.
ಶನಿವಾರ ಪರೀಕ್ಷೆ ನಡೆಸಲಾಗಿತ್ತು. ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಬ್ಬರೂ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಟಿಯರ ಜೊತೆ ನೇರ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ನಟಿಯರು ಮಾರ್ಗಸೂಚಿ ಉಲ್ಲಂಘಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಎಂಬ ವರದಿಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.