The New Indian Express
ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಕೋವಿಡ್-19 ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಸಿ. ಕರಿಗೌಡರ್ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಿರ್ದೇಶಿಸಿದ್ದಾರೆ.
ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆಯ ಐಸಿಯುನಲ್ಲಿದ್ದ 62 ವರ್ಷದ ಸೋಂಕಿತ ರೋಗಿಯು ಸಾವನ್ನಪ್ಪಿದ್ದಾರೆ. ವೇದಾಂತ ಗ್ರೂಪ್ ಕಳೆದ ವರ್ಷ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಯ ಕೋವಿಡ್ ಫೀಲ್ಡ್ ಆಸ್ಪತ್ರೆಯನ್ನು ಸ್ಥಾಪಿಸಿತ್ತು. ಇದು ಕಂಪನಿಯಿಂದಲೇ ನಿರ್ವಹಿಸಲ್ಪಡುತ್ತಿದೆ. ಆದರೆ, ಡಾಕ್ಟರ್ ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ಕಿಮ್ಸ್ ಒದಗಿಸುತ್ತದೆ.
ಜನವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದ 62 ವರ್ಷದ ಕೋವಿಡ್ ಪೀಡಿತ ಮಹಿಳಾ ರೋಗಿ ಸೋಮವಾರ ಸೋಮವಾರ ಮೃತಪಟ್ಟಿದ್ದಾರೆ. ನರ್ಸಿಂಗ್ ಸಿಬ್ಬಂದಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಮಧ್ಯಾಹ್ನ ಡ್ಯೂಟಿ ಬದಲಾವಣೆ ಸಂದರ್ಭದಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ನೋಡಿಕೊಳ್ಳುತ್ತಿದ್ದಾಗ ಆಕೆ ಸಾವನ್ನಪ್ಪಿರುವುದಾಗಿ ನರ್ಸಿಂಗ್ ಸಿಬ್ಬಂದಿ ಹೇಳುತ್ತಿದ್ದಾರೆ.
ಕಿಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರ ಪ್ರಕಾರ, ಅಧಿಕ ರಕ್ತದೊತ್ತಡ, ನ್ಯೂಮೊನಿಯಾ ಮತ್ತಿತರ ಸಹ ಅಸ್ವಸ್ಥತೆಯಿಂದ ಬಳುತ್ತಿದ್ದರು. ರೋಗಿಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆಯಲ್ಲಿನ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಸೋಮವಾರ ಮಧ್ಯಾಹ್ನ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, 24 ಗಂಟೆಯೊಳಗೆ ವರದಿಯೊಂದನ್ನು ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಕರಿಗೌಡರ್ ಅವರಿಗೆ ನಿರ್ದೇಶಿಸಿದ್ದಾರೆ. ಡಿಹೆಚ್ ಒ ಬುಧವಾರ ವರದಿ ಸಲ್ಲಿಸಲಿದ್ದಾರೆ. ಕೋವಿಡ್ ಸೋಂಕಿತರ ಚಿಕಿತ್ಸೆಗೆ ಎಲ್ಲಾ ರೀತಿಯ ಮುಂಜಾಗ್ರತೆಯನ್ನು ಜಿಲ್ಲಾಡಳಿತ ಕೈಗೊಂಡಿದೆ. ಸೋಂಕಿತರ ಚಿಕಿತ್ಸೆಗಾಗಿ ಸಾಕಷ್ಟು ಔಷಧ, ಆಕ್ಸಿಜನ್ ಸೌಲಭ್ಯ ಮತ್ತಿತರ ಸೌಲಭ್ಯಗಳನ್ನು ಜಿಲ್ಲೆ ಹೊಂದಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Read more
[wpas_products keywords=”deal of the day”]