Karnataka news paper

ಮಡಿಕೇರಿ: ಉತ್ತರ ಪ್ರದೇಶ ಮೂಲದ 29 ವಲಸೆ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್


The New Indian Express

ಮಡಿಕೇರಿ: ಮಡಿಕೇರಿಯಲ್ಲಿ ಉತ್ತರ ಪ್ರದೇಶ ಮೂಲದ 29 ವಲಸೆ ಕಾರ್ಮಿಕರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅವರು ಕೆಲಸ ಮಾಡಿದ ನಿರ್ಮಾಣ ಸ್ಥಳವನ್ನು ಸೀಲ್ ಮಾಡಲಾಗಿದೆ ಮತ್ತು ಪಾಸಿಟಿವ್ ರೋಗಿಗಳ ಪ್ರತ್ಯೇಕತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಈ ಕಾರ್ಮಿಕರು ಇತ್ತೀಚೆಗೆ ಉತ್ತರ ಪ್ರದೇಶದಿಂದ ಜಿಲ್ಲೆಗೆ ಆಗಮಿಸಿದ್ದು, ನಗರದ ಸೇಂಟ್ ಮೈಕೆಲ್ ಶಾಲೆಯ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನು ಓದಿ: ಬಳ್ಳಾರಿ: ನರ್ಸಿಂಗ್ ಪರೀಕ್ಷೆ ಬರೆಯಲು ಬಂದ ಹೊರ ರಾಜ್ಯದ 68 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್​

ಒಂದೆರಡು ಕೆಲಸಗಾರರಿಗೆ ಜ್ವರ ಕಾಣಿಸಿಕೊಂಡಿದ್ದು, ಅವರು ಜಿಲ್ಲಾ ಆಸ್ಪತ್ರೆಗೆ ತೆರಳಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ನಂತರ, ಸೈಟ್‌ನಲ್ಲಿರುವ ಎಲ್ಲಾ 150 ಕೆಲಸಗಾರರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗ ಒಟ್ಟು 29 ಕಾರ್ಮಿಕರಿಗೆ ಪಾಸಿಟಿವ್ ಬಂದಿದ್ದು, ಇನ್ನು ಕೆಲವರ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಆರೋಗ್ಯ ಇಲಾಖೆಯ ಟ್ರಯಾಜ್ ತಂಡವು ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿತು. ಇಬ್ಬರು ಕೆಲಸಗಾರರನ್ನು ಹೊರತುಪಡಿಸಿ, ಇತರ ಎಲ್ಲಾ ಸೋಂಕಿತರು ಲಕ್ಷಣರಹಿತರಾಗಿದ್ದಾರೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದೊಳಗೆ ಕಾರ್ಮಿಕರನ್ನು ಪ್ರತ್ಯೇಕಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದ ಡಿಎಚ್‌ಒ ಡಾ ವೆಂಕಟೇಶ್ ಅವರು ಹೇಳಿದ್ದಾರೆ.



Read more

[wpas_products keywords=”deal of the day”]