ಬಿಜೆಪಿ ಅಭ್ಯರ್ಥಿ ಗೋಪಿನಾಥರೆಡ್ಡಿ ಅವರು 1227ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕೋಟಿ ಒಡೆಯ ಯೂಸುಫ್ ಷರೀಫ್ ( ಕೆಜಿಎಫ್ ಬಾಬು) 830 ಮತಗಳನ್ನು ಪಡೆದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಎಚ್.ಎಸ್.ಗೋಪಿನಾಥ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸಫ್ ಷರೀಫ್ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು. ಆದರೆ, ಗೋಪಿನಾಥ್ ಮತ್ತು ಯೂಸಫ್ ಷರೀಫ್ ನಡುವೆ ನೇರ ಹಣಾಹಣಿ ಇತ್ತು. ಗೋಪಿನಾಥ್ ಅವರು ಈ ಹಿಂದೆ ಚುನಾವಣಾ ಕಣಕ್ಕಿಳಿದಿದ್ದು, ಕೆಲವೇ ಮತಗಳ ಅಂತರಲ್ಲಿ ಸೋಲನುಭವಿಸಿದ್ದರು. ಬಿಇ ಪದವೀಧರ ಆಗಿರುವ ಗೋಪಿನಾಥ್ ಅವರು ಬಿಜೆಪಿಯಲ್ಲಿ ಹಲವು ಹುದ್ದೆ ನಿರ್ವಹಿಸಿದ್ದರು. ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿರುವುದರಿಂದ ಸಂಘಟಿತವಾಗಿ ಪಕ್ಷದ ಮತ ಪಡೆವ ಚಾಣಕ್ಯತೆ ಇದೆ. ಅಲ್ಲದೆ, ಪಕ್ಷವೇ ಆಡಳಿತದಲ್ಲಿರುವ ಕಾರಣ ಸರ್ಕಾರದ ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಕೇಳಿ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್‌ನ ಯೂಸಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ರಾಜಕೀಯದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಆದ್ರೆ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಅವರನ್ನೂ ಮೀರಿಸಿ 1743 ಕೋಟಿ ರು. ಆಸ್ತಿಯ ಒಡೆಯನಾಗಿರುವುದು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿತ್ತು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರ ಮತಗಳು ಇಲ್ಲದ ಕಾರಣ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರ ಮತಗಳೇ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಿದೆ.