Karnataka news paper

ಭೀಕರ ಅಪಘಾತ: ಡೈವೈಡರ್ ಗೆ ಗುದ್ದಿದ ಆ್ಯಂಬುಲೆನ್ಸ್, ಇಬ್ಬರು ಬಿಎಸ್ ಎಫ್ ಯೋಧರ ಸಾವು!


ANI

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಗಡಿ ರಕ್ಷಣಾ ಪಡೆಯ (ಬಿಎಸ್ಎಫ್-BSF)ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ಸಂಭವಿಸಿದೆ.

ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬಿಎಸ್ ಎಫ್ ಯೋಧರನ್ನು ಹೊತ್ತು ಸಾಗುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಆ್ಯಂಬುಲೆನ್ಸ್ ಮುಗುಚಿಕೊಂಡಿದೆ. 

ಈ ವೇಳೆ ಅದರೊಳಗಿದ್ದವರ ಪೈಕಿ ಇಬ್ಬರು ಬಿಎಸ್ ಎಫ್ ಯೋಧರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. 

ಅಪಘಾತ ಸಂಭವಿಸಿದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಪ್ರಕರಣ  ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





Read more

[wpas_products keywords=”deal of the day”]