Karnataka news paper

ಕೋವಿಡ್ ಕುರಿತು ತಪ್ಪು ಮಾಹಿತಿ ಹರಡುವ ವೈದ್ಯರ ವಿರುದ್ಧ ಕ್ರಮ: ರಾಜ್ಯ ಸರ್ಕಾರ ಎಚ್ಚರಿಕೆ


PTI

ಬೆಂಗಳೂರು: ಕೋವಿಡ್-19 ಕುರಿತು ತಪ್ಪು ಮಾಹಿತಿ ಹರಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ ಕೆಲವು ವೈದ್ಯರಿಗೆ ಮಂಗಳವಾರ ಎಚ್ಚರಿಕೆ ನೀಡಿದೆ.

ಕೆಲವು ವೃತ್ತಿಪರ ವೈದ್ಯರು COVID-19 ಕುರಿತು ಅಪೂರ್ಣ, ತಪ್ಪಾದ ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂತಹ ತಪ್ಪು ಮಾಹಿತಿಯು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಸನ್ನಿವೇಶದಲ್ಲಿ ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗುತ್ತದೆ. ಆರೋಗ್ಯ ಮತ್ತು ಕಂದಾಯ ಅಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸದಿರಲು ಜನರನ್ನು ಪ್ರೋತ್ಸಾಹಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನು ಓದಿ: ಹೋಂ ಐಸೋಲೇಷನ್ ಅವಧಿ 10 ದಿನಗಳಿಂದ 7 ದಿನಕ್ಕೆ ಇಳಿಕೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ಕೊರೋನಾಗೆ ಸಂಬಂಧಿಸಿದಂತೆ ಸಾರ್ವಜನಿಕರೊಂದಿಗೆ ಸಂವಹನ ನಡೆಸುವಾಗ ವೈದ್ಯಕೀಯ ವೃತ್ತಿಪರರು ಹೆಚ್ಚಿನ ಕಾಳಜಿ ಮತ್ತು ಎಚ್ಚರಿಕೆಯನ್ನು ವಹಿಸಬೇಕು. ಯಾವುದೇ ಮಾಧ್ಯಮ ಅಥವಾ ಸಾಮಾಜಿಕ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೊದಲು ಸರ್ಕಾರದ ಮಾರ್ಗಸೂಚಿಗಳನ್ನು, ಸುತ್ತೋಲೆಗಳು ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಉಲ್ಲೇಖಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

“ಮಾಧ್ಯಮ ಅಥವಾ ಸಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ COVID-19 ಕುರಿತು ಯಾವುದೇ ತಪ್ಪು ಮಾಹಿತಿ ಅಥವಾ ವಾಸ್ತವಿಕವಲ್ಲದ ಡೇಟಾವನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆ, 2005 ರ ಸೆಕ್ಷನ್ 54 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆಯ ಸೆಕ್ಷನ್ 4 (ಕೆ) ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.



Read more

[wpas_products keywords=”deal of the day”]