The New Indian Express
ಮೈಸೂರು: ರಾಜ್ಯದಲ್ಲಿ ಪೊಲೀಸರು ಮತ್ತು ಗುಪ್ತಚರ ಇಲಾಖೆಗಳು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್ ವಕ್ತಾರ ಎಚ್.ಎ.ವೆಂಕಟೇಶ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೈಲಾಕ್ ಮಾಜಿ ಅಧ್ಯಕ್ಷ ವೆಂಕಟೇಶ್, ಸಿಎಂ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಮಾದಕ ದ್ರವ್ಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸರ ವಿರುದ್ಧ ಡ್ರಗ್ಸ್ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಗಮನಿಸಿದರೆ ಸಿಎಂ ಮತ್ತು ಪೊಲೀಸ್ ವ್ಯವಸ್ಥೆಗೆ ನೈತಿಕತೆ ಎಲ್ಲಿದೆ ಎಂಬ ಪ್ರಶ್ನೆ ಮೂಡುತ್ತದೆ. ಹೀಗಾಗಿ ಕೂಡಲೇ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕರು ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿರುವ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಮೇಕೆದಾಟು ಪಾದಯಾತ್ರೆಗೆ ಒಗ್ಗಟ್ಟಿನಿಂದ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ಏಳು ಕಾಂಗ್ರೆಸ್ ಮುಖಂಡರು, ಇಬ್ಬರು ಸ್ವಾತಂತ್ರ್ಯ ಹೋರಾಟಗಾರರು ಸೇರಿ 20ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಿಜೆಪಿ ತನ್ನ ಶಕ್ತಿ ಬಳಸಿ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುತ್ತಿದೆ. ಶೀಘ್ರದಲ್ಲೇ ರಾಜ್ಯಾದ್ಯಂತ ‘ಜೈಲ್ ಭರೋ’ ಅಭಿಯಾನ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Read more
[wpas_products keywords=”deal of the day”]