Karnataka news paper

3,467.62 ಕೋಟಿ ರೂ. ತೆರಿಗೆ ಮುಂಗಡ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಧನ್ಯವಾದ


PTI

ಬೆಂಗಳೂರು: ರಾಜ್ಯಗಳ ತೆರಿಗೆ ಹಂಚಿಕೆಯಡಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,467.62 ಕೋಟಿ ರೂಪಾಯಿ ತೆರಿಗೆ ಹಂಚಿಕೆಯ ಮುಂಗಡ ಕಂತು ಬಿಡುಗಡೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ಹೇಳಿದ್ದಾರೆ. ಅಲ್ಲದೆ ಇದು ರಾಜ್ಯದ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದು ಶುಕ್ರವಾರ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಸಿಎಂ, ರಾಜ್ಯವು ಕೊರೋನಾ ಮೂರನೇ ಅಲೆ ಎದುರಿಸುತ್ತಿರುವ ಸಮಯದಲ್ಲಿ ಕೇಂದ್ರದಿಂದ ಈ ನೆರವು ಬಂದಿದೆ ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಗುರುವಾರ ರಾಜ್ಯಗಳಿಗೆ ಒಟ್ಟು 47,541 ಕೋಟಿ ರೂಪಾಯಿ ತೆರಿಗೆ ಹಂಚಿಕೆ ಮುಂಗಡ ಕಂತು ಬಿಡುಗಡೆ ಮಾಡಿದ್ದು, ಈ ಪೈಕಿ ಕರ್ನಾಟಕಕ್ಕೆ 3,467.62 ಕೋಟಿ ರೂಪಾಯಿ ತೆರಿಗೆ ಹಂಚಿಕೆಯ ಮುಂಗಡ ಕಂತು ಬಿಡುಗಡೆ ಮಾಡಿದೆ. ಇದರಲ್ಲಿ 1,733.81 ಕೋಟಿ ಜನವರಿ 2022 ರ ಕಂತು ಮತ್ತು 1733.81 ಕೋಟಿ ಮುಂಗಡ ಕಂತು ಸೇರಿದೆ. ಇದಕ್ಕಾಗಿ ನಾನು ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದ ಜನರ ಪರವಾಗಿ ಧನ್ಯವಾದ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.





Read more

[wpas_products keywords=”deal of the day”]