Karnataka news paper

ಶ್ರೀನಗರ: ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ದಾಳಿ- ಇಬ್ಬರು ಸಾವು, 12ಮಂದಿಗೆ ಗಾಯ


Source : The New Indian Express

ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. 

ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸಂಜೆ ವೇಳೆ ಪಂಥಾ ಚೌಕ್ ಬಳಿಯ ಝೆವಾನ್ ನಲ್ಲಿ ಈ ದಾಳಿ ನಡೆದಿದ್ದು, 12 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 

ಘಟನಾ ಪ್ರದೇಶವನ್ನು ಸಂಪೂರ್ಣ ಪೊಲೀಸ್, ಭದ್ರತಾ ಸಿಬ್ಬಂದಿಗಳು ಸುತ್ತುವರೆದಿದ್ದು, ಉಗ್ರರನ್ನು ಹಿಡಿಯಲು ಶೋಧಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 





Read more