The New Indian Express
ಬೆಳಗಾವಿ: ಕೊರೋನಾ ನಿಯಮಗಳನ್ನ ಬ್ರೇಕ್ ಮಾಡಿ ವೀಕೆಂಡ್ ಕರ್ಫ್ಯೂ ಮಧ್ಯೆಯೂ ಕಾರ್ಯಕ್ರಮವನ್ನ ಆಯೋಜಿಸಿದ್ದ ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಾಗಿದೆ.
ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಜ.16 ರಂದು ನಗರದ ಸಂಭಾಜಿ ವೃತ್ತದಲ್ಲಿ ಕಾರ್ಯಕ್ರಮವನ್ನ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನ ಗಾಳಿ ತೂರಲಾಗಿತ್ತು. ಅನಿಲ್ ಬೆನಕೆ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯನ್ನ
ಮಾಡಿದ್ದರು.
ಶಾಸಕ ಅನಿಲ್ ಬೆನಕೆ ವಿಕೇಂಡ್ ಕರ್ಫ್ಯೂ ಉಲ್ಲಂಘಿಸಿ , ಸಂಭಾಜಿ ಮಹಾರಾಜ ದಿನಾಚರಣೆಯಲ್ಲಿ ಮಾಸ್ಕ್, ಸೋಷಿಯಲ್ ಡಿಸ್ಟೆ್ನ್ಸ್ ಇಲ್ಲದೇ 20ಕ್ಕೂ ಹೆಚ್ಚು ಬೆಂಬಲಿಗರ ಜತೆ ಭಾಗಿಯಾಗಿದ್ದರು. ಈ ಆರೋಪದ ಮೇಲೆ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ.
ಇದನ್ನೂ ಓದಿ: ಸಚಿವರು, ಶಾಸಕರು ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ
ಕೋವಿಡ್ ನಿಯಮ ಜಾರಿಯಲ್ಲಿದ್ದರೂ ಶಾಸಕ ಅನಿಲ್ ಬೆನಕೆ ಎಮ್ಮೆ ಓಡಿಸುವ ಸ್ಪರ್ಧೆ ಉದ್ಘಾಟಿಸಿದ್ದರು, ಅಲ್ಲದೆ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಜನರು ಗುಂಪು ಸೇರುವಂತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.
Read more
[wpas_products keywords=”deal of the day”]