ಹೈಲೈಟ್ಸ್:
- ಏಪ್ರಿಲ್ 14 ರಂದು ತೆರೆಗೆ ಬರಲಿದೆ ‘ಕೆಜಿಎಫ್: ಚಾಪ್ಟರ್ 2’
- ‘ಕೆಜಿಎಫ್: ಚಾಪ್ಟರ್ 2’ ಎದುರು ಬಿಡುಗಡೆಯಾಗಲಿದೆ ‘ಲಾಲ್ ಸಿಂಗ್ ಚಡ್ಡಾ’
- ಬಾಕ್ಸ್ ಆಫೀಸ್‌ನಲ್ಲಿ ಯಶ್ ವರ್ಸಸ್ ಆಮೀರ್ ಖಾನ್! ಗೆಲ್ಲೋರು ಯಾರು?
‘ಲಾಲ್ ಸಿಂಗ್ ಚಡ್ಡಾ’ ಬಿಡುಗಡೆ ದಿನಾಂಕ ಫಿಕ್ಸ್
ಆಮೀರ್ ಖಾನ್ ಅಭಿನಯದ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಕೂಡ ಏಪ್ರಿಲ್ 14, 2022 ರಂದೇ ಬಿಡುಗಡೆಯಾಗಲಿದೆ. ಹಾಗ್ನೋಡಿದ್ರೆ, ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಡಿಸೆಂಬರ್ 25, 2020 ರಂದು ರಿಲೀಸ್ ಆಗಬೇಕಿತ್ತು. ಆದರೆ, ಕೋವಿಡ್‌ನಿಂದಾಗಿ ಚಿತ್ರದ ಬಿಡುಗಡೆ ದಿನಾಂಕ ಪೋಸ್ಟ್ ಪೋನ್ ಆಗಿತ್ತು. ಇದೀಗ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ ರಿಲೀಸ್ ಡೇಟ್ ಏಪ್ರಿಲ್ 14, 2022ಕ್ಕೆ ಫಿಕ್ಸ್ ಆಗಿದೆ. ಆ ಮೂಲಕ ‘ಕೆಜಿಎಫ್: ಚಾಪ್ಟರ್ 2’ ಮತ್ತು ‘ಲಾಲ್ ಸಿಂಗ್ ಚಡ್ಡಾ’ ಒಂದೇ ದಿನ ರಿಲೀಸ್ ಆಗಿ ಬಾಕ್ಸ್ ಆಫೀಸ್‌ನಲ್ಲಿ ಸೆಣಸಾಡಲಿದೆ.
ಅಧಿಕೃತ ಮಾಹಿತಿ
‘ಲಾಲ್ ಸಿಂಗ್ ಚಡ್ಡಾ’ ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಸಾಮಾಜಿಕ ಜಾಲತಾಣದ ಮುಖಾಂತರ ಹಂಚಿಕೊಂಡಿದೆ. ‘’ಆಮೀರ್ ಖಾನ್ ಪ್ರೊಡಕ್ಷನ್ಸ್ ನಿರ್ಮಾಣದ ‘ಲಾಲ್ ಸಿಂಗ್ ಚಡ್ಡಾ’ ಏಪ್ರಿಲ್ 14, 2022ರಂದೇ ಬಿಡುಗಡೆಯಾಗಲಿದೆ. ಈ ಚಿತ್ರದ ನಿರ್ಮಾಣದ ವೇಳೆ ನಮಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸುತ್ತೇವೆ. ‘ಲಾಡ್ ಸಿಂಗ್ ಚಡ್ಡಾ’ ಚಿತ್ರವನ್ನು ಅದ್ವೈತ್ ಚಂದನ್ ನಿರ್ದೇಶನ ಮಾಡಿದ್ದಾರೆ. ಪ್ರೀತಂ ಸಂಗೀತ ನೀಡಿದ್ದಾರೆ. ಅಮಿತಾಬ್ ಭಟ್ಟಾಚಾರ್ಯ ಸಾಹಿತ್ಯ ಬರೆದಿದ್ದಾರೆ’’ ಎಂದು ಚಿತ್ರತಂಡ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಗುಸುಗುಸು ಹಬ್ಬಿತ್ತು
ಏಪ್ರಿಲ್ 14, 2022 ರಂದು ‘ಕೆಜಿಎಫ್: ಚಾಪ್ಟರ್ 2’ ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ರಿಲೀಸ್ ಡೇಟ್ ಮುಂದಕ್ಕೆ ಹೋಗಬಹುದು ಎಂಬ ಗುಸುಗುಸು ಎಲ್ಲೆಡೆ ಹಬ್ಬಿತ್ತು. ಆದರೆ, ಈಗ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಏಪ್ರಿಲ್ 14 ರಂದೇ ತೆರೆಗೆ ಬರುವುದು ಕನ್ಫರ್ಮ್ ಆಗಿದೆ. ಹೀಗಾಗಿ, ಏಪ್ರಿಲ್ 14 ರಂದು ಬಾಕ್ಸ್ ಆಫೀಸ್‌ನಲ್ಲಿ ಸ್ಟಾರ್ ವಾರ್ ಗ್ಯಾರೆಂಟಿ.
ಲಾಲ್ ಸಿಂಗ್ ಚಡ್ಡಾ
ಹಾಲಿವುಡ್‌ನ ‘ಫಾರೆಸ್ಟ್ ಗಂಪ್’ ಸಿನಿಮಾದ ಹಿಂದಿ ರೀಮೇಕ್ ‘ಲಾಲ್ ಸಿಂಗ್ ಚಡ್ಡಾ’. ಸಿನಿಮಾದಲ್ಲಿ ಲಾಲ್ ಸಿಂಗ್ ಚಡ್ಡಾ ಪಾತ್ರದಲ್ಲಿ ಆಮೀರ್ ಖಾನ್ ನಟಿಸಿದ್ದಾರೆ. ಕರೀನಾ ಕಪೂರ್ ಖಾನ್, ನಾಗ ಚೈತನ್ಯ, ಮೋನಾ ಸಿಂಗ್ ಪ್ರಮುಖ ಪಾತ್ರದಲ್ಲಿದ್ದಾರೆ. ವಿಶೇಷ ಪಾತ್ರಗಳಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್, ಮಾಧುರಿ ದೀಕ್ಷಿತ್, ಕಾಜೋಲ್, ಕರೀಷ್ಮಾ ಕಪೂರ್ ಕಾಣಿಸಿಕೊಂಡಿದ್ದಾರೆ.
Read more
[wpas_products keywords=”deal of the day party wear dress for women stylish indian”]