ಹೈಲೈಟ್ಸ್:
- ನಟ ನಿಖಿಲ್ ಕುಮಾರಸ್ವಾಮಿ ಅವರ ಹೊಸ ಸಿನಿಮಾ ಫಸ್ಟ್‌ಲುಕ್ ರಿಲೀಸ್
- 34ನೇ ವರ್ಷಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ
- ಹುಟ್ಟುಹಬ್ಬದ ದಿನ ನಿಖಿಲ್ ಹೊಸ ಸಿನಿಮಾ ಫಸ್ಟ್‌ಲುಕ್ ರಿಲೀಸ್
ಯುವರಾಜ ಈಗ ಯುದುವೀರ!
ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ ಸಿನಿಮಾ ರೆಡಿಯಾಗ್ತಿದೆ. ಈ ಸಿನಿಮಾಗೆ ‘ಯದುವೀರ‘ ಎಂಬ ಟೈಟಲ್ ಇಡಲಾಗಿದ್ದು, ಫಸ್ಟ್ ಲುಕ್ ಕೂಡ ಅನಾವರಣ ಮಾಡಲಾಗಿದೆ. ‘ಯದುವೀರ’ ಸಿನಿಮಾಗೆ ಮಂಜು ಅಥರ್ವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಮಂಜು ಚಿತ್ರರಂಗದಲ್ಲಿ ಇದ್ದಾರೆ. ಯಶ್ ನಟನೆಯ ‘ಮಾಸ್ಟರ್ ಪೀಸ್’, ಶಿವರಾಜ್ಕುಮಾರ್ ಅಭಿನಯದ ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ ಡೈರೆಕ್ಟರ್ ಕೂಡ ಆಗಿದ್ದರು. ಇದೀಗ ಅವರು ನಿಖಿಲ್ ಅವರ ಸಿನಿಮಾದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದುಕೊಳ್ಳುತ್ತಿದ್ದಾರೆ.
‘ರೈಡರ್’ ಬಳಿಕ ಹೊಸ ಸಿನಿಮಾ ಘೋಷಣೆ ಮಾಡಿದ ನಟ ನಿಖಿಲ್ ಕುಮಾರಸ್ವಾಮಿ
ಈ ಸಿನಿಮಾ ಕಥೆ ಏನು? ಏನಿರಲಿದೆ?
ನಿಖಿಲ್ ಹುಟ್ಟುಹಬ್ಬಕ್ಕೆ ಈ ಚಿತ್ರದ ಟೈಟಲ್ ಇಂದು ಘೋಷಣೆ ಆಗಿದೆ. ಜತೆಗೆ ಫಸ್ಟ್ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಮೂಲಕ ನಿಖಿಲ್ ಬರ್ತ್ಡೇಗೆ ಅಭಿಮಾನಿಗಳಿಗೆ ಚಿತ್ರತಂಡದಿಂದ ಗಿಫ್ಟ್ ಸಿಕ್ಕಿದೆ. ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್‌ಟೇನರ್ ಸಿನಿಮಾವಾಗಿರುವ ‘ಯದುವೀರ’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.
ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ‘ಮಫ್ತಿ’, ‘ಮದಗಜ’ ಸಿನಿಮಾಗಳ ಸಿನಿಮಾಟೋಗ್ರಾಫರ್ ನವೀನ್ ಕ್ಯಾಮೆರಾ ಕೈ ಚಳಕ ಈ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಪ್ರಾರಂಭಿಸಿರುವ ಚಿತ್ರತಂಡ ಸದ್ಯದಲ್ಲಿಯೇ ಉಳಿದ ತಾರಾಬಳಗದ ಬಗ್ಗೆ ಮಾಹಿತಿ ನೀಡಲಿದೆ.
ನಂಜನಗೂಡಲ್ಲಿ ‘ರೈಡರ್’ ರೌಂಡ್ಸ್..! ನಿಖಿಲ್ ಕುಮಾರಸ್ವಾಮಿಗೆ ಫ್ಯಾನ್ಸ್ ಜೈಕಾರ..
ಬರ್ತ್‌ಡೇ ಆಚರಿಸಿಕೊಳ್ಳಲ್ಲ ಎಂದ ನಿಖಿಲ್ ಕುಮಾರಸ್ವಾಮಿ
“ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ” ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಹುಟ್ಟುಹಬ್ಬದ ಶುಭಾಶಯ ತಿಳಿಸಿದವರಿಗೆ ನಿಖಿಲ್ ಧನ್ಯವಾದ
“ನನ್ನ ಮುಂದಿನ ಚಿತ್ರ ‘ಯದುವೀರ’ ಫಸ್ಟ್ ಲುಕ್ ನಿಮಗಾಗಿ. ನನ್ನ ಜನ್ಮದಿನಕ್ಕೆ ಶುಭ ಕೋರುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ನಿಖಿಲ್ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದಾರೆ. ಅಂದಹಾಗೆ ‘ರೈಡರ್‘ ಸಿನಿಮಾ ನಂತರದಲ್ಲಿ ನಿಖಿಲ್ ಈ ಚಿತ್ರ ಒಪ್ಪಿಕೊಂಡಿದ್ದಾರೆ. ಒಟ್ಟಿನಲ್ಲಿ ನಿಖಿಲ್ ಒಂದಾದ ಮೇಲೆ ಒಂದರಂತೆ ಸಿನಿಮಾಗಳನ್ನು ಒಪ್ಪಿಕೊಂಡು ಚಿತ್ರರಂಗದಲ್ಲಿ ಬ್ಯುಸಿಯಾಗುತ್ತಿದ್ದಾರೆ.
Read more
[wpas_products keywords=”deal of the day sale today offer all”]